ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ರಾಜ್ಯದಲ್ಲಿ ಜನಾಶೀರ್ವಾದ ಪ್ರಚಾರ ರ್ಯಾಲಿಯಲ್ಲಿ ತೊಡಗಿದ್ದಾರೆ.
ಉತ್ತರ ಕರ್ನಾಟಕದಲ್ಲಿ ಜನಶೀರ್ವಾದದ ರ್ಯಾಲಿಯಲ್ಲಿ ಮಾತನಾಡುವ ವೇಳೆ ಕಾಯಕಯೋಗಿ, ಜಗಜ್ಯೋತಿ ಬಸವಣ್ಣನವರ ಕುರಿತು ಮಾತನಾಡಿದರು. ಬಸವಣ್ಣನವರ ವಚನವೊಂದನ್ನು ಅಸ್ಪಷ್ಟವಾಗಿ ಉಚ್ಛರಿಸಿರುವ ವಿಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.