ಕೇಜ್ರಿವಾಲ್, ಸಿಸೋಡಿಯಾ ವಿರುದ್ಧ ಕ್ರಮಕ್ಕೆ ದೆಹಲಿ ಸರ್ಕಾರಿ ನೌಕರರ ಆಗ್ರಹ

ದೆಹಲಿ ಮುಖ್ಯಕಾರ್ಯದರ್ಶಿ ಅನ್ಶು ಪ್ರಕಾಶ್ ಮೇಲೆ ಆಮ್ ಆದ್ಮಿ ಪಕ್ಷದ ಶಾಸಕರು ನಡೆಸಿದ ಹಲ್ಲೆ ಪ್ರಕರಣದಲ್ಲಿ ಶಾಮೀಲಾಗಿರುವುದಕ್ಕೆ ಕೇಜ್ರಿವಾಲ್ ಹಾಗೂ ದೆಹಲಿ ಉಪಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ವಿರುದ್ಧ
ಕೇಜ್ರಿವಾಲ್
ಕೇಜ್ರಿವಾಲ್
ನವದೆಹಲಿ: ದೆಹಲಿ ಮುಖ್ಯಕಾರ್ಯದರ್ಶಿ ಅನ್ಶು ಪ್ರಕಾಶ್ ಮೇಲೆ ಆಮ್ ಆದ್ಮಿ ಪಕ್ಷದ ಶಾಸಕರು ನಡೆಸಿದ ಹಲ್ಲೆ ಪ್ರಕರಣದಲ್ಲಿ ಶಾಮೀಲಾಗಿರುವುದಕ್ಕೆ ಕೇಜ್ರಿವಾಲ್ ಹಾಗೂ ದೆಹಲಿ ಉಪಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ವಿರುದ್ಧ ಕ್ರಮಕ್ಕೆ ದೆಹಲಿ ಸರ್ಕಾರಿ ನೌಕರರು ಆಗ್ರಹಿಸಿದ್ದಾರೆ. 
ದೆಹಲಿ ಸರ್ಕಾರಿ ನೌಕರರ ಸಂಘಟನೆಯ ಸದಸ್ಯರಾದ ಪೂಜಾ ಜೋಷಿ ದೆಹಲಿ ಸಿಎಂ ಹಾಗೂ ಉಪಮುಖ್ಯಮಂತ್ರಿ ಹಲ್ಲೆ ನಡೆದಿರುವುದನ್ನು ನಿರಾಕರಿಸುತ್ತಿದ್ದಾರೆ. ಇದು ಈ ಪ್ರಕರಣದಲ್ಲಿ ಅವರು ಶಾಮೀಲಾಗಿದ್ದಾರೆ ಎಂಬುದನ್ನು ತೋರಿಸುತ್ತದೆ. ಈ ಹಿನ್ನೆಲೆಯಲ್ಲಿ ಲೆಫ್ಟಿನೆಂಟ್ ಗೌರ್ನರ್ ಹಾಗೂ ದೆಹಲಿ ಪೊಲೀಸ್ ಆಯುಕ್ತರು ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ. 
ಮುಖ್ಯಕಾರ್ಯದರ್ಶಿಗಳ ಮೇಲೆ ಹಲ್ಲೆ ಪ್ರಕರಣದಲ್ಲಿ ಕ್ರಮ ಕೈಗೊಳ್ಳುವವರೆಗೂ ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳೊಂದಿಗೆ ಸಭೆಯಲ್ಲಿ ಭಾಗವಹಿಸುವುದಿಲ್ಲ ಎಂದು ದೆಹಲಿ ಸರ್ಕಾರಿ ನೌಕರರು ಎಚ್ಚರಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com