

ರಾಂಚಿ; ಜಾರ್ಖಂಡ್ ನ ಪಾಲ್ವಾಮಾ ಜಿಲ್ಲೆಯಲ್ಲಿಂದು ನಡೆದ ಎನ್ ಕೌಂಟರ್ ನಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ನಾಲ್ವರು ನಕ್ಸಲೀಯರನ್ನು ಹತ್ಯೆ ಮಾಡಲಾಗಿದೆ.
ಲಾಲಾಘಟಿ- ನೌದಿಹಾ ಪ್ರದೇಶದಲ್ಲಿ ಇಂದು ಬೆಳಿಗ್ಗೆ 8-30ರ ಸುಮಾರಿನಲ್ಲಿ ಈ ಘಟನೆ ನಡೆದಿದೆ.
ಸಿಆರ್ ಪಿಎಫ್ ಹಾಗೂ ಜಾರ್ಖಂಡ್ ರಾಜ್ಯ ಪೊಲೀಸರು ಜಂಟಿಯಾಗಿ ನಡೆಸಿದ ಕಾರ್ಯಾಚರಣೆಯಲ್ಲಿ ನಾಲ್ವರು ನಕ್ಸಲೀಯರು ಹತರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ
ಹತರಾದ ನಕ್ಸಲೀಯರಿಂದ ಎರಡು ಬಂದೂಕನ್ನು ವಶಪಡಿಸಿಕೊಂಡಿದ್ದು, ಈ ಪ್ರದೇಶದಾದ್ಯಂತ ಶೋಧ ಕಾರ್ಯಚಾರಣೆ
ನಡೆಸಲಾಯಿತು ಎಂದು ಅವರು ಹೇಳಿದ್ದಾರೆ.