ಜಮ್ಮು-ಕಾಶ್ಮೀರ: ಗಡಿ ನುಸುಳಲು ಯತ್ನಿಸುತ್ತಿದ್ದ ಉಗ್ರರನ್ನು ಹಿಮ್ಮೆಟ್ಟಿಸಿದ ಸೇನೆ

ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯ ಅಂತರಾಷ್ಟ್ರೀಯ ಗಡಿ ನುಸುಳಲು ಯತ್ನ ನಡೆಸುತ್ತಿದ್ದ ಉಗ್ರರನ್ನು ದಿಟ್ಟ ಉತ್ತರ ನೀಡುವ ಮೂಲಕ ಭಾರತೀಯ ಸೇನೆ ಹಿಮ್ಮೆಟ್ಟಿಸಿದೆ ಎಂದು ಸೋಮವಾರ ತಿಳಿದುಬಂದಿದೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ರಜೌರಿ: ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯ ಅಂತರಾಷ್ಟ್ರೀಯ ಗಡಿ ನುಸುಳಲು ಯತ್ನ ನಡೆಸುತ್ತಿದ್ದ ಉಗ್ರರನ್ನು ದಿಟ್ಟ ಉತ್ತರ ನೀಡುವ ಮೂಲಕ ಭಾರತೀಯ ಸೇನೆ ಹಿಮ್ಮೆಟ್ಟಿಸಿದೆ ಎಂದು ಸೋಮವಾರ ತಿಳಿದುಬಂದಿದೆ. 
ಸಾಂಬ್ ಜಿಲ್ಲೆಯ ರಾಮ್ಗರ್ಹ್ ಸೆಕ್ಟರ್ ಬಳಿಯಿರುವ ಅಂತರಾಷ್ಟ್ರೀಯ ಗಡಿ ರೇಖೆ ಬಳಿ ಉಗ್ರರ ಗುಂಪೊಂದು ಗಡಿ ನುಸುಳಲು ಯತ್ನ ನಡೆಸುತ್ತಿತ್ತು. ಈ ವೇಳೆ ಗಡಿ ಬಳಿ ಅನುಮಾನಾಸ್ಪದ ಓಡಾಟಗಳು ಕಂಡು ಬರುತ್ತಿರುವುದು ಭದ್ರತಾ ಪಡೆಗಳ ಗಮನಕ್ಕೆ ಬಂದಿದೆ. 
ಕೂಡಲೇ ಉಗ್ರರ ಮೇಲೆ ಗುಂಡಿನ ದಾಳಿ ನಡೆಸಿದೆ. ಈ ವೇಳೆ ಉಗ್ರರು ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಯಾವುದೇ ರೀತಿಯ ಗಡಿನುಸುಳುವಿಕೆಯನ್ನು ವಿಫಲಗೊಳಿಸಲು ಸೇನೆ ಸಿದ್ಧವಾಗಿದೆ ಎಂದು ಬಿಎಸ್ಎಫ್ ಅಧಿಕಾರಿಗಳು ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com