ನಾಗರಿಕ ಸೇವಾ ಪರೀಕ್ಷೆಯಲ್ಲಿ ಪಿಒಕೆಯನ್ನು ಆಜಾದ್ ಕಾಶ್ಮೀರ್ ಎಂದು ಮುದ್ರಣ, ತನಿಖೆಗೆ ಆದೇಶ

ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ನಾಗರಿಕ ಸೇವಾ ಪರೀಕ್ಷೆಯ ಪ್ರಶ್ನೆ ಪತ್ರಿಕೆಯಲ್ಲಿ ಪಾಕ್ ಆಕ್ರಮಿತ ಕಾಶ್ಮೀರವನ್ನು ಆಜಾದ್ ಕಾಶ್ಮೀರ್ ಎಂದು ಮುದ್ರಿಸಲಾಗಿದ್ದು ಇದೀಗ ಭಾರೀ ವಿವಾದಕ್ಕೆ ಕಾರಣವಾಗಿದೆ...
ಪಿಒಕೆ
ಪಿಒಕೆ
ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ನಾಗರಿಕ ಸೇವಾ ಪರೀಕ್ಷೆಯ ಪ್ರಶ್ನೆ ಪತ್ರಿಕೆಯಲ್ಲಿ ಪಾಕ್ ಆಕ್ರಮಿತ ಕಾಶ್ಮೀರವನ್ನು ಆಜಾದ್ ಕಾಶ್ಮೀರ್ ಎಂದು ಮುದ್ರಿಸಲಾಗಿದ್ದು ಇದೀಗ ಭಾರೀ ವಿವಾದಕ್ಕೆ ಕಾರಣವಾಗಿದೆ. 
ಭೂಗೋಳ ವಿಷಯದ ಪ್ರಶ್ನೆ ಪತ್ರಿಕೆಯಲ್ಲಿ ಈ ಪ್ರಮಾದವಾಗಿದ್ದು ಪರೀಕ್ಷಾ ಮಂಡಳಿ ಅಧ್ಯಕ್ಷ ಸಿಮ್ರಾನ್ ದೀಪ್ ಸಿಂಗ್ ತನಿಖೆ ನಡೆಸಲು ಆದೇಶಿಸಿದ್ದು ಶೀಘ್ರದಲ್ಲೇ ವರದಿ ಸಲ್ಲಿಸುವಂತೆ ಸೂಚಿಸಿದ್ದಾರೆ. 
ಇನ್ನು ಪ್ರಶ್ನೆ ಪತ್ರಿಕೆಯಲ್ಲಿ ಆಜಾದ್ ಕಾಶ್ಮೀರ್ ಪದ ಮುದ್ರಣ ಕುರಿತಂತೆ ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ಶುರುವಾಗಿದೆ. ಆಜಾದ್ ಕಾಶ್ಮೀರ್ ಎಂಬ ಪದವನ್ನು ಹುಟ್ಟು ಹಾಕಿದ್ದು ಪಾಕಿಸ್ತಾನ. ಇದು ಪ್ರಶ್ನೆ ಪತ್ರಿಕೆಯಲ್ಲಿ ಬಂದಿದ್ದು ತಪ್ಪು ಎಂದು ಹಲವರು ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com