ರಾಜಕೀಯ ಲಾಭದ ದೃಷ್ಟಿಯಿಂದ ಕಾವೇರಿ ವಿವಾದ ನಿರ್ವಹಿಸಬೇಡಿ: ಕೇಂದ್ರಕ್ಕೆ ಡಿಎಂಕೆ

ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಮಂಗಳವಾರ ತೀವ್ರ ವಾಗ್ದಾಳಿ ನಡೆಸಿದ ಡಿಎಂಕೆ, ...
ಸ್ಟಾಲಿನ್
ಸ್ಟಾಲಿನ್
Updated on: 
ಚೆನ್ನೈ: ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಮಂಗಳವಾರ ತೀವ್ರ ವಾಗ್ದಾಳಿ ನಡೆಸಿದ ಡಿಎಂಕೆ,  ಕೆಲವೇ ತಿಂಗಳಲ್ಲಿ ನಡೆಯುವ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ರಾಜಕೀಯ ಲಾಭ ಪಡೆಯು ದೃಷ್ಟಿಯಿಂದ ಕಾವೇರಿ ವಿವಾದ ನಿರ್ವಹಿಸಬೇಡಿ ಎಂದು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದೆ.
ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರು ಮೌನವಹಿಸಿರುವುದು, ತಮಿಳುನಾಡಿಗೆ ಬಂದಾಗಲೂ ಆ ಬಗ್ಗೆ ಮಾತನಾಡದಿರುವುದು ಖಂಡನೀಯ ಎಂದು ತಮಿಳುನಾಡು ಪ್ರತಿಪಕ್ಷ ನಾಯಕ ಎಂಕೆ ಸ್ಟಾಲಿನ್ ಟ್ವೀಟ್ ಮಾಡಿದ್ದಾರೆ.
ಕಳೆದ ಶನಿವಾರ ಚೆನ್ನೈಗೆ ಆಗಮಿಸಿದ್ದ ಪ್ರಧಾನಿ ಮೋದಿ ಅವರು ಅಮ್ಮ ಸ್ಕೂಟರ್ ಯೋಜನೆಗೆ ಚಾಲನೆ ನೀಡಿದ್ದರು. ಈ ವೇಳೆ ತಮಿಳುನಾಡು ಮುಖ್ಯಮಂತ್ರಿ ಕೆ ಪಳನಿಸ್ವಾಮಿ ಅವರು ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಕಾವೇರಿ ನಿರ್ವಹಣಾ ಮಂಡಳಿ ಮತ್ತು ಕಾವೇರಿ ನೀರು ನಿಯಂತ್ರಣ ಸಮಿತಿ ರಚಿಸಬೇಕು ಎಂದು ಪ್ರಧಾನಿಗೆ ಒತ್ತಾಯಿಸಿದ್ದರು.
ಈ ಮಧ್ಯೆ 6 ವಾರಗಳೊಳಗೆ ಕಾವೇರಿ ನಿರ್ವಹಣಾ ಮಂಡಳಿ ರಚಿಸಬೇಕು ಎಂಬ ಸುಪ್ರೀಂಕೋರ್ಟ್ ಆದೇಶಕ್ಕೆ ಇಂದು ಉತ್ತರ ನೀಡಿರುವ ಕೇಂದ್ರ ಸರ್ಕಾರ ಕಾವೇರಿ ನಿರ್ವಹಣಾ ಮಂಡಳಿ ರಚನೆ ಕಷ್ಟ ಎಂದು ಹೇಳಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com