ಭಾರತ-ಪಾಕ್ ಮಾತುಕತೆ ಪುನಾರಂಭಗೊಂಡರಷ್ಟೇ ಗಡಿಯಲ್ಲಿ ದಾಳಿ ತಡೆಗಟ್ಟಲು ಸಾಧ್ಯ: ಫಾರೂಕ್

ಭಾರತ ಹಾಗೂ ಪಾಕಿಸ್ತಾನದ ನಡುವೆ ಮಾತುಕತೆ ಪುನಾರಂಭಗೊಂಡರಷ್ಟೇ ಗಡಿಯಲ್ಲಿ ನಡೆಯುತ್ತಿರುವ ಶೆಲ್ ದಾಳಿಗಳನ್ನು ತಡೆಗಟ್ಟಲು ಸಾಧ್ಯ ಎಂದು ಜಮ್ಮು-ಕಾಶ್ಮೀರ ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾ ಹೇಳಿದ್ದಾರೆ.
ಫಾರೂಕ್ ಅಬ್ದುಲ್ಲಾ
ಫಾರೂಕ್ ಅಬ್ದುಲ್ಲಾ
ಜಮ್ಮು: ಭಾರತ ಹಾಗೂ ಪಾಕಿಸ್ತಾನದ ನಡುವೆ ಮಾತುಕತೆ ಪುನಾರಂಭಗೊಂಡರಷ್ಟೇ ಗಡಿಯಲ್ಲಿ ನಡೆಯುತ್ತಿರುವ ಶೆಲ್ ದಾಳಿಗಳನ್ನು ತಡೆಗಟ್ಟಲು ಸಾಧ್ಯ ಎಂದು ಜಮ್ಮು-ಕಾಶ್ಮೀರ ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾ ಹೇಳಿದ್ದಾರೆ. 
ಪಾಕಿಸ್ತಾನದಿಂದ ಗಡಿಯಲ್ಲಿ ನಿರಂತರ ದಾಳಿ ಹಾಗೂ ಕದನ ವಿರಾಮ ಉಲ್ಲಂಘನೆಯ ಬಗ್ಗೆ ಪ್ರತಿಕ್ರಿಯೆ ನೀಡಿರುವ ಫಾರೂಕ್ ಅಬ್ದುಲ್ಲಾ,  ಉಭಯ ರಾಷ್ಟ್ರಗಳು ಶಾಂತಿಯ ಮಾತುಕತೆ ನಡೆಸದೇ ಇದ್ದರೆ ನಮ್ಮ ಗಡಿಯಿಂದಲೂ ದಾಳಿಯಾಗುವುದು ನಿಲ್ಲುವುದಿಲ್ಲ, ಪಾಕಿಸ್ತಾನದವರೂ ದಾಳಿ ನಡೆಸುವುದನ್ನು ನಿಲ್ಲಿಸುವುದಿಲ್ಲ ಎಂದು ಹೇಳಿದ್ದಾರೆ. 
ಜಮ್ಮು-ಕಾಶ್ಮೀರದ ವಿಷಯವಾಗಿ ಸಾಮಾನ್ಯವಾಗಿ ವಿವಾದಾತ್ಮಕ ಹೇಳಿಕೆಗಳಿಂದಲೇ ಸುದ್ದಿಯಲ್ಲಿರುವ ಫಾರೂಕ್ ಅಬ್ದುಲ್ಲಾ, ಇತ್ತೀಚಿನ ದಿನಗಳಲ್ಲಿ ಪಾಕಿಸ್ತಾನ ಗಡಿ ಪ್ರದೇಶದಲ್ಲಿ ನಡೆಸುತ್ತಿರುವ ಕದನ ವಿರಾಮ ಉಲ್ಲಂಘನೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com