ನವದೆಹಲಿ: ಮೂರು ಈಶಾನ್ಯ ರಾಜ್ಯಗಳ ವಿಧಾನಸಭೆಗೆ ಮತದಾನ ಮುಕ್ತಾಯಗೊಂಡಿದ್ದು, ಚುನಾವಣೋತ್ತರ ಸಮೀಕ್ಷೆಗಳ ಪ್ರಕಾರ ತ್ರಿಪುರಾದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ.
ತ್ರಿಪುರಾದಲ್ಲಿ 2 ದಶಕಗಳ ನಂತರ ಕಮ್ಯುನಿಸ್ಟ್ ಪಕ್ಷ ಅಧಿಕಾರ ಕಳೆದುಕೊಳ್ಳಲಿದ್ದು, ಜನ್ ಕಿ ಬಾತ್ ಹಾಗೂ ನ್ಯೂಸ್ ಎಕ್ಸ್ ನಡೆಸಿರುವ ಸಮೀಕ್ಷೆಗಳ ಪ್ರಕಾರ 60 ವಿಧಾನಸಭಾ ಕ್ಷೇತ್ರಗಳ ಪೈಕಿ ಬಿಜೆಪಿ ಐಪಿಎಫ್ ಟಿ ಮೈತ್ರಿಕೂಟ 350-45 ಕ್ಷೇತ್ರಗಳನ್ನು ಗೆಲ್ಲಲಿವೆ.
ಆಕ್ಸಿಸ್ ಮೈ ಇಂಡಿಯಾ ನಡೆಸಿರುವ ಚುನಾವಣೋತ್ತರ ಸಮೀಕ್ಷೆಯ ಪ್ರಕಾರ ಬಿಜೆಪಿ-ಐಪಿಎಫ್ ಟಿ ಮೈತ್ರಿಗೆ 44-50 ಸ್ಥಾನಗಳು ಗೆಲ್ಲಲಿವೆ ಎಂದು ಹೇಳಿದೆ. ಆಡಳಿತಾರೂಢ ಕಮ್ಯುನಿಸ್ಟ್ ಪಕ್ಷ 14-23 ಸ್ಥಾನಗಳನ್ನು ಗಳಿಸಲಿದ್ದು ಅಧಿಕಾರ ಕಳೆದುಕೊಳ್ಳಲಿದೆ ಎಂದು ಚುನಾವಣೋತ್ತರ ಸಮೀಕ್ಷೆಗಳು ತಿಳಿಸಿವೆ.