ಸುಸ್ತಿದಾರರ ಆಸ್ತಿ ಜಪ್ತಿ: ದೇಶ ಭ್ರಷ್ಟ ಆರ್ಥಿಕ ಅಪರಾಧಿಗಳ ಮಸೂದೆ 2018 ಕ್ಕೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ

ಸುಸ್ತಿದಾರರ ಆಸ್ತಿ ಜಪ್ತಿ ಮಾಡುವುದಕ್ಕೆ ಅನುವು ಮಾಡಿಕೊಡುವ ದೇಶ ತೊರೆದ ಆರ್ಥಿಕ ಅಪರಾಧಿಗಳ ಮಸೂದೆ- 2018 ಕ್ಕೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ಸೂಚಿಸಿದೆ.
ಅರುಣ್ ಜೆಟ್ಲಿ
ಅರುಣ್ ಜೆಟ್ಲಿ
ನವದೆಹಲಿ: ಸುಸ್ತಿದಾರರ ಆಸ್ತಿ ಜಪ್ತಿ ಮಾಡುವುದಕ್ಕೆ ಅನುವು ಮಾಡಿಕೊಡುವ ದೇಶ ತೊರೆದ ಆರ್ಥಿಕ ಅಪರಾಧಿಗಳ ಮಸೂದೆ- 2018 ಕ್ಕೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ಸೂಚಿಸಿದೆ. 
ಪಂಜಾಬ್ ನ್ಯಾಷನಲ್ ಬ್ಯಾಂಕ್ ಗೆ 12 ಸಾವಿರ ಕೋಟಿ ವಂಚನೆ ಮಾಡಿರುವ ಪ್ರಕರಣದಲ್ಲಿ ನೀರವ್ ಮೋದಿಯನ್ನು ವಾಪಸ್ ಕರೆತರಲು ಕಷ್ಟಸಾಧ್ಯವಾಗಿರುವಾಗಲೇ ಈ ಮಸೂದೆಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ಸೂಚಿಸಿದ್ದು, ಇಂತಹ ಅಪರಾಧಿಗಳ ವಿರುದ್ಧ ಕ್ರಮ ಕೈಗೊಳ್ಳುವುದಕ್ಕೆ ಮಸೂದೆ ಸಹಕಾರಿಯಾಗಲಿದೆ. 
ಸಚಿವ ಸಂಪುಟ ಸಭೆಯ ಬಳಿಕ ಅರುಣ್ ಜೆಟ್ಲಿ ಈ ಬಗ್ಗೆ ಮಾಹಿತಿ ನೀಡಿದ್ದು, ಆರ್ಥಿಕ ಅಪರಾಧಿಗಳ ಬೇನಾಮಿ ಸೇರಿದಂತೆ ಎಲ್ಲಾ ಆಸ್ತಿಗಳನ್ನು ವಶಪಡಿಸಿಕೊಳ್ಳುವುದಕ್ಕೆ ಈ ಮಸೂದೆ ಸಹಕಾರಿಯಾಗಲಿದೆ ಎಂದು ಮಾಹಿತಿ ನೀಡಿದ್ದಾರೆ. ದೇಶದಲ್ಲಷ್ಟೇ ಅಲ್ಲದೇ ವಿದೇಶಗಳಲ್ಲಿರುವ ಆಸ್ತಿಯನ್ನೂ ವಶಪಡಿಸಿಕೊಳ್ಳಲು ಈ ಮಸೂದೆ ಅನುವು ಮಾಡಿಕೊಡಲಿದೆ.  ಆದರೆ ಇದಕ್ಕೂ ಮುನ್ನ ಆಯಾ ದೇಶಗಳೊಂದಿಗೆ ಸರ್ಕಾರ ಒಪ್ಪಂದ ಮಾಡಿಕೊಳ್ಳಬೇಕೆಂದು ಜೇಟ್ಲಿ ತಿಳಿಸಿದ್ದಾರೆ. ಮಸೂದೆಯನ್ನು ಬಜೆಟ್ ಅಧಿವೇಶನದಲ್ಲಿ ಮಂಡಿಸಲಾಗುತ್ತದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com