ಬಂಡಿಪೋರಾ: ಸೇನೆ, ಉಗ್ರರ ನಡುವೆ ಗುಂಡಿನ ಚಕಮಕಿ, ಓರ್ವ ಉಗ್ರ ಹತ, ಕಾರ್ಯಾಚರಣೆ ಮುಂದುವರಿಕೆ

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ವಿರುದ್ಧದ ಸೇನಾ ಕಾರ್ಯಾಚರಣೆ ಮುಂದುವರೆದಿದ್ದು, ಬಂಡಿಪೋರಾದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಉಗ್ರನನ್ನು ಸೆದೆಬಡಿಯಲಾಗಿದೆ ಎಂದು ತಿಳಿದುಬಂದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಬಂಡಿಪೋರಾ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ವಿರುದ್ಧದ ಸೇನಾ ಕಾರ್ಯಾಚರಣೆ ಮುಂದುವರೆದಿದ್ದು, ಬಂಡಿಪೋರಾದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಉಗ್ರನನ್ನು ಸೆದೆಬಡಿಯಲಾಗಿದೆ ಎಂದು ತಿಳಿದುಬಂದಿದೆ.

ಗುರುವಾರ ಬೆಳಗ್ಗೆ ಬಂಡಿಪೋರಾದ ಶಕ್ರುದಿನ್ ಗ್ರಾಮದ ಹಜಿನ್ ಪ್ರದೇಶದಲ್ಲಿ ಉಗ್ರರು ಅವಿತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಸಿದ್ಧತೆಯೊಂದಿಗೆ ಸೇನೆ ದಾಳಿ ನಡೆಸಿದೆ. ಈ ವೇಳೆ ಸೈನಿಕರ ಮೇಲೆ ಉಗ್ರರು ಪ್ರತಿದಾಳಿ ನಡೆಸಿದ್ದು, ಸೇನೆ ನಡೆಸಿದ ಎನ್ ಕೌಂಟರ್ ನಲ್ಲಿ ಓರ್ವ ಉಗ್ರ ಹತನಾಗಿದ್ದಾನೆ. ಸೇನೆ ದಾಳಿ ಮಾಡುತ್ತಿದ್ದಂತೆಯೇ ಗ್ರಾಮದೊಳಗೆ ನುಸುಳಿದ ಉಗ್ರ ನಾಪತ್ತೆಯಾಗಿದ್ದು, ಇದೀಗ ಉಗ್ರರ ಶೋಧಕ್ಕಾಗಿ ವ್ಯಾಪಕ ಕಾರ್ಯಾಚರಣೆ ನಡೆಸಲಾಗುತ್ತಿದೆ.

ಪ್ರಸ್ತುತ ಶಕ್ರದ್ದೀನ್ ಗ್ರಾಮದಾದ್ಯಂತ ಸೇನೆ ಸುತ್ತುವರೆದಿದ್ದು, ಗ್ರಾಮವನ್ನು ಸಂಪರ್ಕಿಸುವ ರಸ್ತೆಗಳು ಮತ್ತು ಅರಣ್ಯ ಮಾರ್ಗಗಳನ್ನು ಸೇನೆ ವಶಪಡಿಸಿಕೊಂಡಿದೆ. ಅಂತೆಯೇ ಪ್ರಸ್ತುತ ಶೋಧ ಕಾರ್ಯಾಚರಣೆ ಆರಂಭಿಸಲಾಗಿದ್ದು, ಗ್ರಾಮದಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಆರಂಭದಲ್ಲಿ ಉಗ್ರರಿಗಾಗಿ ಶೋಧ ನಡೆಸಲಾಗುತ್ತಿತ್ತು. ಆದರೆ ಉಗ್ರರು ಸೈನಿಕರ ಮೇಲೆ ದಾಳಿ ಮಾಡಿದ್ದರಿಂದ ಎನ್ ಕೌಂಟರ್ ಆರಂಭಿಸಲಾಯಿತು ಎಂದು ಸೇನಾಧಿಕಾರಿಯೊಬ್ಬರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X

Advertisement

X
Kannada Prabha
www.kannadaprabha.com