ಭಯೋತ್ಪಾದನೆ ಮಟ್ಟಹಾಕುವ ವಿಚಾರದಲ್ಲಿ ಎನ್ ಡಿಎ ಉತ್ತಮ: ಅಂಕಿ ಅಂಶಗಳಿಂದ ಬಹಿರಂಗ

ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆ(ಎಲ್ ಒಸಿ) ಬಳಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘನೆ ಮುಂದುವರೆಸಿದ್ದರೂ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ನವದಹಲಿ: ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆ(ಎಲ್ ಒಸಿ) ಬಳಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘನೆ ಮುಂದುವರೆಸಿದ್ದರೂ, ಉಗ್ರರನ್ನು ಮಟ್ಟ ಹಾಕುವ ವಿಚಾರದಲ್ಲಿ ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರವೇ ಉತ್ತಮ ಎಂಬುದು ಅಂಕಿ ಅಂಶಗಳಿಂದ ಬಹಿರಂಗವಾಗಿದೆ.
ಎಎನ್ ಐ ಸುದ್ದಿ ಸಂಸ್ಥೆಗೆ ಲಭ್ಯವಾದ ಅಧಿಕೃತ ಅಂಕಿ ಅಂಶಗಳ ಪ್ರಕಾರ, ಈ ಹಿಂದಿನ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದ ಅವಧಿಗೆ ಹೊಲಿಸಿದರೆ ಎನ್ ಡಿಎ ಆಡಳಿತಾವಧಿಯಲ್ಲಿ ಭಯೋತ್ಪಾದನೆ ಕೃತ್ಯಗಳು ಕಡಿಮೆಯಾಗಿವೆ.
ಎನ್ ಡಿಎ(2014, 2015, 2017) ಅವಧಿಯಲ್ಲಿ ಭಯೋತ್ಪಾದನೆಗೆ ಸಂಬಂಧಿಸಿದ ಒಟ್ಟು 1,094 ಘಟನೆಗಳು ಸಂಭವಿಸಿದ್ದು, ಯುಪಿಎ(2010ರಿಂದ 2013) ಅವಧಿಯಲ್ಲಿ 1,218 ಭಯೋತ್ಪಾದನೆ ಕೃತ್ಯಗಳು ನಡೆದಿವೆ.
ಎನ್ ಡಿಎ ಅವಧಿಯಲ್ಲೇ ಭದ್ರತಾ ಪಡೆ ಅತಿ ಹೆಚ್ಚು ಉಗ್ರರನ್ನು ಹೊಡೆದುರುಳಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಒಟ್ಟು 580 ಉಗ್ರರನ್ನು ಹತ್ಯೆ ಮಾಡಿದೆ. ಯುಪಿಎ ಸರ್ಕಾರ ಅಧಿಕಾರದಲ್ಲಿದ್ದಾಗ 471 ಉಗ್ರರನ್ನು ಹೊಡೆದುರುಳಿಸಲಾಗಿತ್ತು.
ಎನ್ ಡಿಎ ಅವಧಿಯಲ್ಲಿ ಒಟ್ಟು 100 ನಾಗರಿಕರು ಮೃತಪಟ್ಟಿದ್ದು, ಯುಪಿಎ ಅವಧಿಯಲ್ಲಿ 108 ನಾಗರಿಕರು ಮೃತಪಟ್ಟಿದ್ದರು ಎಂಬುದು ಅಂಕಿ ಅಂಶಗಳಿಂದ ತಿಳಿದು ಬಂದಿದೆ.
ಭಯೋತ್ಪಾದನೆಗೆ ಸಂಬಂಧಿಸಿದಂತೆ ಕಳೆದ ಡಿಸೆಂಬರ್ 29ರಂದು ಟ್ವೀಟ್ ಮಾಡಿದ್ದ ಕಾಂಗ್ರೆಸ್ ವಕ್ತಾರ ರಂದೀಪ್ ಸುರ್ಜೆವಾಲಾ ಅವರು, ಯುಪಿಎ ಅವಧಿಯಲ್ಲಿ ಕೇವಲ 86 ಭಯೋತ್ಪಾದನೆ ಕೃತ್ಯಗಳು ನಡೆದಿದ್ದವು. ಆದರೆ ಎನ್ ಡಿಎ ಅಧಿಕಾರಕ್ಕೆ ಬಂದ ಕಳೆದ 43 ತಿಂಗಳಲ್ಲಿ 203 ಭಯೋತ್ಪಾದನೆ ಕೃತ್ಯಗಳು ನಡೆದಿದೆ ಎಂದು ಹೇಳಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com