ಮಹಾರಾಷ್ಟ್ರದಲ್ಲಿ ದಲಿತರ ಪ್ರತಿಭಟನೆ: ಬಿಜೆಪಿ 'ಫ್ಯಾಸಿಸ್ಟ್' ಎಂದು ರಾಹುಲ್ ಟೀಕೆ

ಭೀಮಾ ಕೋರೆಗಾಂವ್ ವಿಜಯೋತ್ಸವದ ವೇಳೆ ಉಂಟಾದ ಹಿಂಸಾಚಾರದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದು ಬಿಜೆಪಿಯನ್ನು ಫ್ಯಾಸಿಸ್ಟ್...
ರಾಹುಲ್ ಗಾಂಧಿ
ರಾಹುಲ್ ಗಾಂಧಿ
ನವದೆಹಲಿ: ಭೀಮಾ ಕೋರೆಗಾಂವ್ ವಿಜಯೋತ್ಸವದ ವೇಳೆ ಉಂಟಾದ ಹಿಂಸಾಚಾರದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದು ಬಿಜೆಪಿಯನ್ನು ಫ್ಯಾಸಿಸ್ಟ್ ಎಂದು ಟೀಕಿಸಿದ್ದಾರೆ. 
ಟ್ವಿಟರ್ ನಲ್ಲಿ ಬರೆದಿರುವ ರಾಹುಲ್ ಗಾಂಧಿ, ಬಿಜೆಪಿ ಹಾಗೂ ಆರ್ ಎಸ್ಎಸ್ ಪ್ಯಾಸಿಸ್ಟ್ ಸಂಘಟನೆಗಳಾಗಿದ್ದು, ಭಾರತದಲ್ಲಿ ದಲಿತರು ಸಮಾಜದಲ್ಲಿ ಉನ್ನತಿ ಹೊಂದಬಾರದು ಎಂಬ ಮನಸ್ಥಿತಿ ಹೊಂದಿದೆ. ಉನಾ, ರೋಹಿತ್ ವೇಮುಲಾ, ಈಗ ಭೀಮ ಕೋರೆಗಾಂವ್ ಇದಕ್ಕೆ ಉದಾಹರಣೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. 
ಪುಣೆಯ ಕೋರೆಗಾಂವ್ ನಲ್ಲಿ ನಿನೆ ನಡೆಯುತ್ತಿದ್ದ ಭೀಮ ಕೋರೆಗಾಂವ್ ಸಂಗ್ರಾಮದ 200ನೇ ವಿಜಯೋತ್ಸವ ಮೆರವಣಿಗೆ ವೇಳೆ ಕೆಲ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದರು. ಇದರಿಂದ ಎರಡು ಗುಂಪುಗಳ ನಡುವೆ ಸಂಘರ್ಷ  ಏರ್ಪಟ್ಟಿತ್ತು. ನೋಡ ನೋಡುತ್ತಿದ್ದಂತೆಯೇ ಅದು ಹಿಂಸಾಚಾರಕ್ಕೆ ತಿರುಗಿದ್ದು, 40ಕ್ಕೂ ಅಧಿಕ ವಾಹನಗಳು ಜಖಂಗೊಂಡಿವೆ. ಘಟನೆಯಲ್ಲಿ ಐವರು ಗಾಯಗೊಂಡಿದ್ದು, ಓರ್ವ ಸೋಮವಾರ ಸಂಜೆ ಸಸೂನ್ ಜನರಲ್ ಆಸ್ಪತ್ರೆಯಲ್ಲಿ  ಮೃತಪಟ್ಟಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com