ಐಎನ್​ಎಕ್ಸ್ ಮೀಡಿಯಾ ಪ್ರಕರಣ: ವಿದೇಶ ಪ್ರಯಾಣಕ್ಕೆ ಅನುಮತಿ ಕೋರಿ ಸುಪ್ರೀಂಗೆ ಕಾರ್ತಿ ಚಿದಂಬರಂ ಅರ್ಜಿ

ಐಎನ್ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಕೇಂದ್ರ ಹಣಕಾಸು ಸಚಿವ ಪಿ. ಚಿದಂಬರಂ ಅವರ...
ಕಾರ್ತಿ ಚಿದಂಬರಂ
ಕಾರ್ತಿ ಚಿದಂಬರಂ
Updated on: 
ನವದೆಹಲಿ: ಐಎನ್ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಕೇಂದ್ರ ಹಣಕಾಸು ಸಚಿವ ಪಿ. ಚಿದಂಬರಂ ಅವರ ಪುತ್ರ ಕಾರ್ತಿ ಚಿದಂಬರಂ ಮತ್ತೆ ವಿದೇಶ ಪ್ರಯಾಣಕ್ಕೆ ಅನುಮತಿ ಕೋರಿ ಗುರವಾರ ಸುಪ್ರೀಂ ಕೋರ್ಟ್ ಗೆ ಮನವಿ ಸಲ್ಲಿಸಿದ್ದಾರೆ.
ವ್ಯವಹಾರ ನಿಮಿತ್ತ ಜನವರಿ 10ರಿಂದ 20ರ ವರೆಗೆ ವಿದೇಶಕ್ಕೆ ತೆರಳಲು ಅನುಮತಿ ನೀಡುವಂತೆ ಕೋರಿ ಕಾರ್ತಿ ಚಿದಂಬರಂ ಅವರು ಇಂದು ಅರ್ಜಿ ಸಲ್ಲಿಸಿದ್ದು, ಕೋರ್ಟ್ ವಿಚಾರಣೆಯನ್ನು ಜನವರಿ 8ಕ್ಕೆ ನಿಗದಿಪಡಿಸಿದೆ.
ಈ ಮುಂಚೆ ನವೆಂಬರ್ 20ರಂದು ತಮ್ಮ ಮಗಳ ಶಾಲಾ ಪ್ರವೇಶಕ್ಕಾಗಿ ಲಂಡನ್ ತೆರಳಲು ಕಾರ್ತಿ ಚಿದಂಬರಂ ಅವರಿಗೆ ಕೋರ್ಟ್ ಅನುಮತಿ ನೀಡಿತ್ತು.
ಈ ಮಧ್ಯೆ ಐಎನ್ಎಕ್ಸ್ ಮೀಡಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವಹಿವಾಟು ತಡೆ ಕಾಯ್ದೆಯಡಿ ಜಾರಿ ನಿರ್ದೇಶನಾಲಯ ಜನವರಿ 11ರೊಳಗೆ ವಿಚಾರಣೆಗೆ ಹಾಜರಾಗುವಂತೆ ಕಾರ್ತಿ ಚಿದಂಬರಂ ಅವರಿಗೆ ಸಮನ್ಸ್ ಜಾರಿ ಮಾಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com