ಎನ್​ಆರ್​ಸಿ ವಿರುದ್ಧ ಹೇಳಿಕೆ: ಮಮತಾ ವಿರುದ್ಧ ಅಸ್ಸಾಂ ಪೊಲೀಸರಿಂದ ಎಫ್ಐಆರ್​ದಾಖಲು

ರಾಷ್ಟ್ರೀಯ ಪೌರ ನೋಂದಣಿ(ಎನ್ಆರ್​ಸಿ) ಟೀಕಿಸಿದ್ದ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ....
ಮಮತಾ ಬ್ಯಾನರ್ಜಿ
ಮಮತಾ ಬ್ಯಾನರ್ಜಿ
ಗೌಹಾಟಿ: ರಾಷ್ಟ್ರೀಯ ಪೌರ ನೋಂದಣಿ(ಎನ್ಆರ್​ಸಿ) ಪ್ರಕ್ರಿಯೆ ಟೀಕಿಸಿದ್ದ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ವಿರುದ್ಧ ಅಸ್ಸಾಂ ಪೊಲೀಸರು ಶುಕ್ರವಾರ ಎಫ್ ಐಆರ್ ದಾಖಲಿಸಿದ್ದಾರೆ.
ನಿನ್ನೆ ರ್ಯಾಲಿಯೊಂದರಲ್ಲಿ  ಅಸ್ಸಾಂನ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದ ಮಮತಾ ಬ್ಯಾನರ್ಜಿ, ಎನ್ಆರ್​ಸಿ ಪ್ರಕ್ರಿಯೆ ಕೇವಲ ಬೆಂಗಾಲಿ ಭಾಷಿಗರನ್ನು ಅಸ್ಸಾಂ ರಾಜ್ಯದಿಂದ ಹೊರದಬ್ಬಲು ಮಾಡಲಾಗುತ್ತಿದೆ ಎಂದು ಆರೋಪಿಸಿದ್ದರು. ಅಲ್ಲದೆ ಅಕಸ್ಮಾತ್​ ಆ ರೀತಿಯಾದಲ್ಲಿ ತಾವು ಸುಮ್ಮನಿರುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದರು.
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ವಿರುದ್ಧ ಅಸ್ಸಾಂ ಪೊಲೀಸರು ಇಂದು ಎಫ್ಐಆರ್ ದಾಖಲಿಸಿದ್ದು, ಅಸ್ಸಾಂ ಬಿಜೆಪಿ ಸರ್ಕಾರದ ಈ ನಿರ್ಧಾರಕ್ಕೆ ತೃಣಮೂಲ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ. ಈ ರೀತಿ ಕೇಸ್ ದಾಖಲಿಸುವದರಿಂದ ದೀದಿಯ ಹೋರಾಟ ತಡೆಯಲು ಸಾಧ್ಯವಿಲ್ಲ ಎಂದು ಹೇಳಿದೆ.
ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಅಸ್ಸಾಂ ಸಚಿವ ಚಂದ್ರಮೋಹನ್​ ಪಟೌರಿ, ಈ ಪ್ರಕ್ರಿಯೆಯನ್ನು ಅಸ್ಸಾಂನ ಜನತೆ ಬೆಂಬಲಿಸಿದೆ. ಎಲ್ಲ ರಾಜಕೀಯ ಪಕ್ಷಗಳು ಬೆಂಬಲ ಸೂಚಿಸಿವೆ. ಆದರೆ, ಬ್ಯಾನರ್ಜಿ ಅವರು ಮಾತ್ರ ಪ್ರಚೋದನಾಕಾರಿ ಹೇಳಿಕೆ ನೀಡಿದ್ದಲ್ಲದೆ, ನಮ್ಮ ಜನತೆಗೆ ಅವಮಾನಿಸಿದ್ದಾರೆ ಎಂದಿದ್ದಾರೆ.
ಗೌಹಾಟಿ ಮೂಲದ ವಕಿಲರೊಬ್ಬರು ಮಮತಾ ಬ್ಯಾನರ್ಜಿ ನೀಡಿರುವ ಹೇಳಿಕೆ ವಿರುದ್ಧ ಎಫ್​ಐಆರ್​ ದಾಖಲಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com