ಫೆ.1ಕ್ಕೆ ಕೇಂದ್ರ ಬಜೆಟ್: ಜ.29 ರಿಂದ ಅಧಿವೇಶನ ಆರಂಭ

2017-18ನೇ ಸಾಲಿನ ಕೇಂದ್ರ ಬಜೆಟ್ ಅಧಿವೇಶನ ಜ.29 ರಿಂದ ಆರಂಭವಾಗಲಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಅನಂತ್ ಕುಮಾರ್ ಅವರು ಶುಕ್ರವಾರ ಹೇಳಿದ್ದಾರೆ...
ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ (ಸಂಗ್ರಹ ಚಿತ್ರ)
ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ (ಸಂಗ್ರಹ ಚಿತ್ರ)
ನವದೆಹಲಿ: 2017-18ನೇ ಸಾಲಿನ ಕೇಂದ್ರ ಬಜೆಟ್ ಅಧಿವೇಶನ ಜ.29 ರಿಂದ ಆರಂಭವಾಗಲಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಅನಂತ್ ಕುಮಾರ್ ಅವರು ಶುಕ್ರವಾರ ಹೇಳಿದ್ದಾರೆ. 
ಈ ಕುರಿತಂತೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅವರು, ಮೊದಲ ಹಂತದ ಅಧಿವೇಶನ ಜ.29 ರಿಂದ ಫೆ.9 ರವರೆಗೂ ನಡೆಯಲಿದ್ದು, ಎರಡನೇ ಹಂತದ ಅಧಿವೇಶನ ಮಾ.5 ರಿಂದ ಏ.6 ರವರೆಗೂ ನಡೆಯಲಿದೆ. ಜ.29 ರಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಜಂಟಿ ಅಧಿವೇಶನವನ್ನುದ್ದೇಶಿಸಿ ಮಾತನಾಡಲಿದ್ದು, ಅಂದೇ ಆರ್ಥಿಕ ಸಮೀಕ್ಷೆ ಕುರಿತು ಚರ್ಚೆ ನಡೆಯಲಿದೆ ಎಂದು ಹೇಳಿದ್ದಾರೆ. 
ಫೆಬ್ರವರಿ 1ಕ್ಕೆ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿಯವರು ಅಂತಿಮವಾಗಿ ಕೇಂದ್ರ ಬಜೆಟ್'ನ್ನು ಮಂಡನೆ ಮಾಡಲಿದ್ದಾರೆ. ಇದು ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮಂಡಿಸುತ್ತಿರುವ ಮೊದಲ ಪೂರ್ಣ ಪ್ರಮಾಣದ ಬಜೆಟ್ ಆಗಲಿದೆ ಎಂದು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com