ಈ ಹಿಂದೆ ಕೇಂದ್ರ ಸರ್ಕಾರ ಮಂಡಿಸಿದ್ದ ತ್ರಿವಳಿ ತಲಾಖ್ ಅನ್ನು ಲೋಕಸಭೆಯಲ್ಲಿ ಅನುಮೋದಿಸಲಾಗಿತ್ತು. ಆದರೆ ರಾಜ್ಯಸಭೆಯಲ್ಲಿ ಕಾಂಗ್ರೆಸ್ ಮತ್ತು ಪ್ರತಿಪಕ್ಷಗಳ ವಿರೋಧದಿಂದಾಗಿ ತ್ರಿವಳಿ ತಲಾಖ್ ಮಸೂದೆಗೆ ಅನುಮೋದನೆ ದೊರೆತಿರಲಿಲ್ಲ. ಮುಸ್ಲಿಂ ಮಹಿಳೆಯರ (ಮದುವೆ ಹಕ್ಕುಗಳ ರಕ್ಷಣೆ) ಮಸೂದೆ 2017ಕ್ಕೆ (ತ್ರಿವಳಿ ತಲಾಖ್ ನಿಷೇಧ ಮಸೂದೆ) ಸಂಬಂಧಿಸಿ ರಾಜ್ಯಸಭೆಯಲ್ಲಿ ಸೃಷ್ಟಿಯಾದ ಬಿಕ್ಕಟ್ಟು ಶುಕ್ರವಾರವೂ ಮುಂದುವರೆದಿದ್ದು, ತ್ರಿವಳಿ ತಲಾಖ್ ಗೆ ರಾಜ್ಯಸಭೆಯಲ್ಲಿ ಅನುಮೋದನೆ ಪಡೆಯುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ.