700 ಕೋಟಿ ವೆಚ್ಚದಲ್ಲಿ ದೇಶಾದ್ಯಂತ 8,500 ಭಾರತೀಯ ರೈಲ್ವೆ ನಿಲ್ದಾಣಗಳಲ್ಲಿ ಉಚಿತ ವೈ-ಫೈ!

ಗ್ರಾಮೀಣ ಮತ್ತು ಕುಗ್ರಾಮದಲ್ಲಿರುವ ರೈಲ್ವೆ ನಿಲ್ದಾಣಗಳು ಸೇರಿದಂತೆ ದೇಶಾದ್ಯಂತ ಇರುವ 8,500 ನಿಲ್ದಾಣಗಳಲ್ಲಿ ಸುಮಾರು 700 ಕೋಟಿ ರುಪಾಯಿ ವೆಚ್ಚದಲ್ಲಿ...
ಭಾರತೀಯ ರೈಲ್ವೆ
ಭಾರತೀಯ ರೈಲ್ವೆ
ನವದೆಹಲಿ: ಗ್ರಾಮೀಣ ಮತ್ತು ಕುಗ್ರಾಮದಲ್ಲಿರುವ ರೈಲ್ವೆ ನಿಲ್ದಾಣಗಳು ಸೇರಿದಂತೆ ದೇಶಾದ್ಯಂತ ಇರುವ 8,500 ನಿಲ್ದಾಣಗಳಲ್ಲಿ ಸುಮಾರು 700 ಕೋಟಿ ರುಪಾಯಿ ವೆಚ್ಚದಲ್ಲಿ ವೈ-ಫೈ ಸೌಲಭ್ಯ ಒದಗಿಸಲು ರೈಲ್ವೆ ಇಲಾಖೆ ಮಂದಾಗಿದೆ. 
ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೀಯ ಡಿಜಿಟಲ್ ಇಂಡಿಯಾ ಭಾಗವಾಗಿ ಸದ್ಯ 216 ಪ್ರಮುಖ ರೈಲು ನಿಲ್ದಾಣಗಳಲ್ಲಿ ಉಚಿತ ವೈ-ಫೈ ಸೇವೆಗಳನ್ನು ನಿಯೋಜಿಸಲಾಗಿದ್ದು ಉಚಿತ ಇಂಟರ್ನೆಟ್ ಸೌಲಭ್ಯದ ಮೂಲಕ ಸುಮಾರು ಎಪ್ಪತ್ತು ಲಕ್ಷ ರೈಲ್ವೆ ಪ್ರಯಾಣಿಕರು ಈ ಸೇವೆಯನ್ನು ಪಡೆಯುತ್ತಿದ್ದಾರೆ. 
ಡಿಜಿಟಲ್ ಯುಗದಲ್ಲಿ ದಿನನಿತ್ಯದ ಕೆಲಸಗಳಲ್ಲಿ ಇಂಟರ್ ನೆಟ್ ಪ್ರಮುಖ ಅವಶ್ಯಕತೆಯಾಗಿದೆ. ಇದರಿಂದಾಗಿ ದೇಶದ ಎಲ್ಲಾ ರೈಲು ನಿಲ್ದಾಣಗಳಲ್ಲಿ ನಾವು ಈ ಸೌಲಭ್ಯವನ್ನು ಒದಗಿಸುತ್ತೇವೆ ಎಂದು ರೈಲ್ವೆ ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ. 
ಯೋಜನೆ ಪ್ರಕಾರ, ಪ್ರಾಥಮಿಕವಾಗಿ ರೈಲು ಪ್ರಯಾಣಿಕರಿಗೆ ಈ ಸೌಲಭ್ಯಕ್ಕಾಗಿ ಪೂರೈಸಲು   1,200 ರೈಲ್ವೆ ನಿಲ್ದಾಣಗಳನ್ನು ಗುರುತಿಸಲಾಗಿದೆ. ನಂತರ ಗ್ರಾಮೀಣ ಹಾಗೂ ಕುಗ್ರಾಮದಲ್ಲಿರುವ ರೈಲು ನಿಲ್ದಾಣಗಳು ಸೇರಿದಂತೆ 7,300 ನಿಲ್ದಾಣಗಳಲ್ಲಿ ಈ ಸೇವೆಯನ್ನು ಒದಗಿಸಲು ಕ್ರಮಕೈಗೊಳ್ಳಲಾಗುತ್ತದೆ ಎಂದರು. 
ಇ-ಆಡಳಿತವನ್ನು ಉತ್ತೇಜಿಸಲು ಗ್ರಾಮೀಣ ಭಾಗಗಳಲ್ಲಿ ಡಿಜಿಟಲ್ ಸೇವೆ ಒದಗಿಸುವ ಸಲುವಾಗಿ ವೈ-ಫೈ ಸೌಲಭ್ಯವನ್ನು ಸ್ಥಳೀಯ ಜನರಿಗೆ ನೀಡಲಾಗುವುದು ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com