ದೇಶ

ಮುಂಬೈ: ಶಿವಸೇನೆ ಮಾಜಿ ಕಾರ್ಪೋರೇಟರ್ ಭೀಕರ ಹತ್ಯೆ

ಶಿವಸೇನೆ ಮಾಜಿ ಕಾರ್ಪೋರೇಟರ್ ಒಬ್ಬರನ್ನು ದುಷ್ಕರ್ಮಿಗಳು ಭೀಕರವಾಗಿ ಹತ್ಯೆಗೈದಿರುವ ಘಟನೆ ಭಾನುವಾರ ರಾತ್ರಿ ಮುಂಬೈನಲ್ಲಿ ನಡೆದಿದೆ.

ಮುಂಬೈ: ಶಿವಸೇನೆ ಮಾಜಿ ಕಾರ್ಪೋರೇಟರ್ ಭೀಕರ ಹತ್ಯೆ
ಮೃತ ಶಿವಸೇನಾ ಕಾರ್ಪೋರೇಟರ್
Published On :
ಮುಂಬೈ: ಶಿವಸೇನೆ ಮಾಜಿ ಕಾರ್ಪೋರೇಟರ್ ಒಬ್ಬರನ್ನು ದುಷ್ಕರ್ಮಿಗಳು ಭೀಕರವಾಗಿ ಹತ್ಯೆಗೈದಿರುವ ಘಟನೆ ಭಾನುವಾರ ರಾತ್ರಿ ಮುಂಬೈನಲ್ಲಿ ನಡೆದಿದೆ.
ಮುಂಬೈ ಹೊರವಲಯದ ಕಂಡಿವಿಯ ಸಮತಾ ನಗರದ ಮಾಜಿ ಕಾರ್ಪೋರೇಟರ್ ಅಶೋಕ್ ಸಾವಂತ್ (62 ವರ್ಷ)ರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಹತ್ಯೆಗೈದು, ಪರಾರಿಯಾಗಿದ್ದಾರೆ. 
ನಿನ್ನೆ ರಾತ್ರಿ ಸುಮಾರು 11 ಗಂಟೆ ಸುಮಾರಿನಲ್ಲಿ ಅಶೋಕ್ ಸಾವಂತ್ ಅವರು ಸ್ನೇಹಿತರೊಬ್ಬರನ್ನು ಭೇಟಿ ಮಾಡಿ ಮನೆಗೆ ವಾಪಸ್ ಆಗುತ್ತಿದ್ದ ವೇಳೆ ಕಂಡಿವಿ ಆಸ್ಪತ್ರೆ ಬಳಿಯಲ್ಲೇ ಅವರನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು ಹಲ್ಲೆ  ಮಾಡಿದ್ದಾರೆ. ಬಳಿಕ ಜನ ಸೇರುತ್ತಿದ್ದಂತೆಯೇ ದುಷ್ಕರ್ಮಿಗಳು ಪರಾರಿಯಾಗಿದ್ದು, ಬಳಿಕ ಸ್ಥಳೀಯರು ಅವರನ್ನು ಆಸ್ಪತ್ರೆಗೆ ದಾಖಲು ಮಾಡಿದ್ದರಾದರೂ ಅಷ್ಟು ಹೊತ್ತಿಗಾಗಲೇ ಅವರ ಪ್ರಾಣ ಪಕ್ಷಿ ಹಾರಿಹೊಗಿತ್ತು.
ಇನ್ನು ಮೃತ ಅಶೋಕ್ ಸಾವಂತ್ ಕೇಬಲ್ ಉದ್ಯಮ ನಡೆಸುತ್ತಿದ್ದರು. ಹೀಗಾಗಿ ಸ್ಥಳೀಯ ಕೇಬಲ್ ಮಾಫಿಯಾ ಅವರ ಕೊಲೆಗೆ ಕಾರಣವಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಪ್ರಸ್ತುತ ಪ್ರಕರಣ ದಾಖಲಿಸಿಕೊಂಡಿರುವ  ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.