ನವದೆಹಲಿ: ಮಣಿಪುರದಲ್ಲಿ ಸೇನೆ, ಅಸ್ಸಾಂ ರೈಫಲ್ಸ್ ಮತ್ತು ಪೊಲೀಸರಿಂದ ನಡೆದಿದ ಎನ್ನಲಾದ ನಕಲಿ ಎನ್ ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೋಮವಾರ ಸಿಬಿಐ ಮತ್ತು ವಿಶೇಷ ತನಿಖಾ ತಂಡ(ಎಸ್ ಐಟಿ) ತೀವ್ರ ತರಾಟೆಗೆ ತೆಗೆದುಕೊಂಡಿದೆ. ಅಲ್ಲದೆ ಸಿಬಿಐ ಹಾಗೂ ಎಸ್ ಐಟಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದೆ.