ದೇಶ

ನಾಲ್ಕು ವಾರಗಳಲ್ಲಿ ಕಾವೇರಿ ತೀರ್ಪು, ಎರಡು ದಶಕಗಳ ಗೊಂದಲಕ್ಕೆ ಸುಪ್ರೀಂ ತೆರೆ

ಕರ್ನಾಟಕ ಮತ್ತು ತಮಿಳುನಾಡು ನಡುವಿನ ಕಾವೇರಿ ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಒಂದು ತಿಂಗಳಲ್ಲಿ ಅಂತಿಮ ತೀರ್ಪು....

Published On :
ನವದೆಹಲಿ: ಕರ್ನಾಟಕ ಮತ್ತು ತಮಿಳುನಾಡು ನಡುವಿನ ಕಾವೇರಿ ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಒಂದು ತಿಂಗಳಲ್ಲಿ ಅಂತಿಮ ತೀರ್ಪು ಪ್ರಕಟಿಸುವ ಸೂಚನೆ ನೀಡಿದ್ದು, ಎರಡು ದಶಕಗಳಿಂದ ಸಾಕಷ್ಟು ಗೊಂದಲ ಸೃಷ್ಟಿಸಲಾಗಿದೆ ಎಂದು ಮಂಗಳವಾರ ಹೇಳಿದೆ.
ನಾಲ್ಕು ವಾರಗಳಲ್ಲಿ ಅಂತಿಮ ತೀರ್ಪು ಪ್ರಕಟಿಸಿದ ನಂತರ ಯಾವುದೇ ವೇದಿಕೆ ಕಾವೇರಿ ಜಲಾನಯನ ಪ್ರದೇಶಕ್ಕೆ ಸಂಬಂಧಿಸಿದ ವಿಷಯ ಪ್ರಸ್ತಾಪಿಸಬಹುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.
2007ರಲ್ಲಿ ಕಾವೇರಿ ನ್ಯಾಯಾಧಿಕರಣದ ಐತೀರ್ಪು ಪ್ರಶ್ನಿಸಿ ಕರ್ನಾಟಕ, ತಮಿಳುನಾಡು ಮತ್ತು ಕೇರಳ ರಾಜ್ಯಗಳು ಸಲ್ಲಿಸಿದ್ದ ವಿಶೇಷ ಮೇಲ್ಮನವಿ ಅರ್ಜಿಗಳ ಸುದೀರ್ಘ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ತ್ರಿಸದಸ್ಯ ಪೀಠ ತೀರ್ಪನ್ನು ಕಾಯ್ದಿರಿಸಿತ್ತು. 
ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಕಳೆದ ಎರಡು ದಶಕಗಳಲ್ಲಿ ಸಾಕಷ್ಟು ಗೊಂದಲಗಳನ್ನು ಸೃಷ್ಟಿಸಲಾಗಿದೆ. ಈ ಕುರಿತು ಅಂತಿಮ ತೀರ್ಪು ನೀಡಿದ ನಂತರ ಯಾವುದೇ ವೇದಿಕೆ ವಿಷಯವನ್ನು ಪ್ರಸ್ತಾಪಿಸಬಹುದು ತ್ರಿಸದಸ್ಯ ಪೀಠ ಹೇಳಿದೆ.
ಬೆಂಗಳೂರಿನ ಕುಡಿಯುವ ನೀರಿನ ಸಮಸ್ಯೆ ಕುರಿತಂತೆ ಕಿರಣ್ ಮೊಜುಂದಾರ್ ನೇತೃತ್ವದ ನಾಗರಿಕರ ವೇದಿಕೆ ಸುಪ್ರೀಂಕೋರ್ಟ್​ಗೆ ಅರ್ಜಿ ಹಾಕಿದ್ದರು. ಈ ಅರ್ಜಿಯ ವಿಚಾರಣೆ ವೇಳೆ ಕಾವೇರಿ ನದಿ ನೀರು ಹಂಚಿಕೆ ಕುರಿತಂತೆ ಅಭಿಪ್ರಾಯ ವ್ಯಕ್ತಪಡಿಸಿರುವ ಸುಪ್ರೀಂಕೋರ್ಟ್, ತಿಂಗಳಲ್ಲಿ ತೀರ್ಪು ಪ್ರಕಟಿಸುವುದಾಗಿ ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.