ಸಿಗರೇಟ್ ಪ್ಯಾಕ್'ನಲ್ಲಿ ಶೇ.85ರಷ್ಟು ಭಾಗ ಎಚ್ಚರಿಕೆ ಸಂದೇಶ: ಕರ್ನಾಟಕ 'ಹೈ' ಆದೇಶಕ್ಕೆ ಸುಪ್ರೀಂ ತಡೆ

ಸಿಗರೇಟ್ ಹಾಗೂ ಇತರ ತಂಬಾಕು ಉತ್ಪನ್ನಗಳ ಪೊಟ್ಟಣಗಳ ಮೇಲೆ ಶೇ.85ರಷ್ಟು ಅಪಾಯದ ಸೂಚನೆಯನ್ನು ತೋರಿಸುವುದನ್ನು ಕಡ್ಡಾಯಗೊಳಿಸಿದ್ದ ರಾಜ್ಯ ಸರ್ಕಾರದ ಕ್ರಮವನ್ನು ರದ್ದುಗೊಳಿಸಿದ್ದ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ಸೋಮವಾರ ತಡೆಯಾಜ್ಞೆ ನೀಡಿದೆ...
ಸುಪ್ರೀಂಕೋರ್ಟ್
ಸುಪ್ರೀಂಕೋರ್ಟ್
ನವದೆಹಲಿ: ಸಿಗರೇಟ್ ಹಾಗೂ ಇತರ ತಂಬಾಕು ಉತ್ಪನ್ನಗಳ ಪೊಟ್ಟಣಗಳ ಮೇಲೆ ಶೇ.85ರಷ್ಟು ಅಪಾಯದ ಸೂಚನೆಯನ್ನು ತೋರಿಸುವುದನ್ನು ಕಡ್ಡಾಯಗೊಳಿಸಿದ್ದ ರಾಜ್ಯ ಸರ್ಕಾರದ ಕ್ರಮವನ್ನು ರದ್ದುಗೊಳಿಸಿದ್ದ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ಸೋಮವಾರ ತಡೆಯಾಜ್ಞೆ ನೀಡಿದೆ. 
ತಂಬಾಕು ಉತ್ಪನ್ನಗಳು ಮಾರಾಟಕ್ಕಿಂತ ನಾಗರೀಕ ಆರೋಗ್ಯ ಪ್ರಾಥಮಿಕ ಅಗತ್ಯವಾಗಿದೆ ಎಂದು ಹೇಳಿರುವ ಸುಪ್ರೀಂಕೋರ್ಟ್ ಕರ್ನಾಟಕದ ಹೈಕೋರ್ಟ್ ಆದೇಶಕ್ಕೆ ತಡೆಯಾಜ್ಞೆ ನೀಡಿದೆ. 
ಸಿಗರೇಟ್ ಪ್ಯಾಕ್ ಮೇಲೆ ಶೇ.85ರಷ್ಟು ಭಾಗದಲ್ಲಿ ಚಿತ್ರ ರೂಪದ ಎಚ್ಚರಿಕೆಯ ಸೂಚನೆ ಮುದ್ರಿಸುವುದನ್ನು ಕಡ್ಡಾಯಗೊಳಿಸುವ 2014ರ ತಿದ್ದುಪಡಿಯನ್ನು ಹೈಕೋರ್ಟ್ ಡಿ.15 ರಂದು ರದ್ದು ಪಡಿಸಿತ್ತು. ಈ ನಿಯಮ ಸಂವಿಧಾನ ಬಾಹಿರ ಎಂದು ನ್ಯಾ.ಬಿ.ಎಸ್.ಪಾಟೀಲ್ ಮತ್ತು ನ್ಯಾ.ಬಿ.ವಿ.ನಾಗರತ್ನ ಅವರಿದ್ದ ವಿಶೇಷ ವಿಭಾಗೀಯ ಪೀಠ ಹೇಳಿತ್ತು. ಈ ತೀರ್ಪಿನ ವಿರುದ್ಧ ಹಲವು ಸಂಘಟನೆಗಳು ಹಾಗೂ ಸಂಸ್ಥೆಗಳು ಸುಪ್ರೀಂಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿದ್ದವು. 

ಇದರಂತೆ ನಿನ್ನೆ ವಿಚಾರಣೆ ನಡೆಸಿರುವ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ, ನ್ಯಾಯಮೂರ್ತಿ ಎ.ಎಂ.ಖಾನ್ವಿಲ್ಕರ್ ಮತ್ತು ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರಿದ್ದ ಪೀಠ, ಸಾರ್ವಜನಿಕರ ಆರೋಗ್ಯ ಎಲ್ಲದಕ್ಕಿಂತಲೂ ಪ್ರಮುಖ. ಅವಳು/ಅವನು ಯಾರೇ ಆದರೂ ಯಾವುದು ಆರೋಗ್ಯದ ಮೇಲೆ ಹೆಚ್ಚು ಪರಿಣಾಮ ಬೀರುತ್ತದೆ ಎಂಬುದರ ಮಾಹಿತಿಯನ್ನು ತಿಳಿದಿರುತ್ತಾರೆ. ಸಿಗರೇಟ್ ವಿಚಾರವನ್ನು ವ್ಯವಹಾರಿಕ ದೃಷ್ಟಿಯಿಂದ ನೋಡಿದರೆ, ಆರೋಗ್ಯದ ಸಮಸ್ಯೆಗಳು ಉಂಟಾಗುತ್ತವೆ ಎಂದು ತಿಳಿಸಿದೆ. 

ಸುಪ್ರೀಂಕೋರ್ಟ್ ಆದೇಶ ಕುರಿತಂತೆ ಪ್ರತಿಕ್ರಿಯೆ ನೀಡಿರುವ ತಲೆ ಮತ್ತು ಕುತ್ತಿಗೆ ಕ್ಯಾನ್ಸರ್ ತಜ್ಞ ಡಾ.ವಿಶಾಲ್ ರಾವ್ ಅವರು, ಸುಪ್ರೀಂ ಆದೇಶ ಸಾರ್ವಜನಿಕ ಆರೋಗ್ಯಕ್ಕೆ ಐತಿಹಾಸಿಕ ಗೆಲುವು ಎಂದೇ ಹೇಳಬಹುದು. ವ್ಯಾಪಾರದ ಹಕ್ಕಿಗಿಂತಲೂ ಜೀವನದ ಹಕ್ಕೂ ಅತ್ಯಂತ ಮುಖ್ಯವಾದದ್ದು ಎಂದು ಭಾವಿಸುತ್ತೇನೆ. ವಾಕ್ ಹಾಗೂ ಆಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆಯುಂಟಾಗಿದೆ ಎಂದು ವ್ಯಾಪಾರಿಗಳು ಹೇಳಿಕೊಂಡಿದ್ದರು. ಹೀಗಾಗಿ ಕರ್ನಾಟಕ ಹೈಕೋರ್ಟ್ ಸರ್ಕಾರದ ಕ್ರಮವನ್ನು ರದ್ದುಗೊಳಿಸಿತ್ತು. ಬಳಿಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಹೆಲ್ತ್ ಫಾರ್ ಮಿಲಿಯನ್ಸ್ ಟ್ರಸ್ಟ್ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು ಎಂದು ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com