ಜಮ್ಮು ಮತ್ತು ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯ ಕೋಕರ್ನಾಗ್ ನ ಲರ್ನೂ ಪ್ರದೇಶದಲ್ಲಿ ಇಬ್ಬರು ಉಗ್ರರನ್ನು ಸೈನಿಕರು ಹೊಡೆದುರುಳಿಸಿದ್ದು, ಇನ್ನೂ ಉಬ್ಬರು ಉಗ್ರರು ಅವಿತಿರುವ ಶಂಕೆ ಮೇರೆಗೆ ಸೇನಾಧಿಕಾರಿಗಳು ತೀವ್ರ ಶೋಧ ನಡೆಸುತ್ತಿದ್ದಾರೆ. ಕಾರ್ಯಾಚರಣೆ ಪ್ರಗತಿಯಲ್ಲಿದ್ದು, ಉಗ್ರರು ಮತ್ತು ಸೇನೆ ನಡುವೆ ಗುಂಡಿನ ಚಕಮಕಿ ಮುಂದುವರೆದಿದೆ.