ಕಲ್ಲಿದ್ದಲು ಹಗರಣ: ನವೀನ್ ಜಿಂದಾಲ್ ವಿರುದ್ಧ ಲಂಚದ ಆರೋಪ ಹೊರಿಸಲು ಸಿಬಿಐ ಒತ್ತಾಯ

ಜಾರ್ಖಂಡ್ ಕಲ್ಲಿದ್ದಲು ಬ್ಲಾಕ್ ಹಂಚಿಕೆಯಲ್ಲಿ ನಡೆದಿರುವ ಅವ್ಯವಹಾರಕ್ಕೆ ಸಂಬಂಧಿಸಿದಂತೆ ನವೀನ್ ಜಿಂದಾಲ್ ವಿರುದ್ಧ ಲಂಚದ ಆರೋಪವನ್ನೂ ಸೇರಿಸಬೇಕೆಂದು ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಹೇಳಿದೆ.
ನವೀನ್ ಜಿಂದಾಲ್
ನವೀನ್ ಜಿಂದಾಲ್
ನವದೆಹಲಿ: ಜಾರ್ಖಂಡ್ ಕಲ್ಲಿದ್ದಲು ಬ್ಲಾಕ್ ಹಂಚಿಕೆಯಲ್ಲಿ ನಡೆದಿರುವ ಅವ್ಯವಹಾರಕ್ಕೆ ಸಂಬಂಧಿಸಿದಂತೆ ನವೀನ್ ಜಿಂದಾಲ್ ವಿರುದ್ಧ ಲಂಚದ ಆರೋಪವನ್ನೂ ಸೇರಿಸಬೇಕೆಂದು ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಹೇಳಿದೆ. 
ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಭರತ್ ಪರಾಶರ್ ಅವರಿಗೆ ಸಿಬಿಐ ಮನವಿ ಸಲ್ಲಿಸಿದ್ದು, ಫೆ.16 ರೊಳಗೆ ಜಿಂದಾಲ್ ಹಾಗೂ ಪ್ರಕರಣದ ಇನ್ನಿತರ ಆರೋಪಿಗಳಿಗೆ ಪ್ರತಿಕ್ರಿಯೆ ನೀಡುವಂತೆ ಸೂಚನೆ ನೀಡಿದೆ. ಜಾರ್ಖಂಡ್ ನ ಕಲ್ಲಿದ್ದಲು ಬ್ಲಾಕ್ ಹಂಚಿಕೆಗೆ ಸಂಬಂಧಿಸಿದಂತೆ ನವೀನ್ ಜಿಂದಾಲ್ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆಯ ಸೆಕ್ಷನ್ 7, 12 ರ ಅಡಿ ಲಂಚ ಪಡೆದಿರುವುದು ಹಾಗೂ ನೀಡಿರುವ ಆರೋಪ ಹೊರಿಸಬೇಕೆಂಬುದು ಸಿಬಿಐ ನ ವಾದವಾಗಿದೆ. 
ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ನವೀನ್ ಜಿಂದಾಲ್, ಕಲ್ಲಿದ್ದಲು ಇಲಾಖೆಯ ಮಾಜಿ ಕೇಂದ್ರ ರಾಜ್ಯ ಖಾತೆ ಸಚಿವ ದಾಸರಿ ನಾರಾಯಣ್ ರಾವ್, ಜಾರ್ಖಂಡ್ ನ ಮಾಜಿ ಮುಖ್ಯಮಂತ್ರಿ ಮಧು ಕೋಡಾ, ಕಲ್ಲಿದ್ದಲು ಇಲಾಖೆಯ ಮಾಜಿ  ಕಾರ್ಯದರ್ಶಿ ಹೆಚ್ ಸಿ ಗುಪ್ತಾ ಸೇರಿದಂತೆ ಹಲವರ ವಿರುದ್ಧ ಕ್ರಿಮಿನಲ್ ಸಂಚು, ವಂಚನೆ, ನಂಬಿಕೆ ಧ್ರೋಹದ ಆರೋಪ ಹೊರಿಸಬೇಕೆಂದು ಏಪ್ರಿಲ್ 2016ರಲ್ಲಿ ಸಿಬಿಐ ವಾದ ಮಂಡಿಸಿತ್ತು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com