ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಯಶ್ವಂತ್ ಸಿನ್ಹಾ ಅವರು, ಅಟಲ್ ಬಿಹಾರಿ ವಾಜಪೇಯಿ, ಎಲ್ ಕೆ ಅಡ್ವಾಣಿ ಅವರ ಕಾಲದಲ್ಲಿದ್ದಂತೆ ಬಿಜೆಪಿ ಪಕ್ಷ ಮೊದಲಿನಂತಿಲ್ಲ. ಹಿಂದೆಲ್ಲಾ ಪಕ್ಷದ ಸಾಮಾನ್ಯ ಕಾರ್ಯಕರ್ತ ಕೂಡ ದೆಹಲಿಗೆ ಹೋಗಿ ಪಕ್ಷದ ಅಧ್ಯಕ್ಷರನ್ನು ಭೇಟಿ ಮಾಡಿ ಚರ್ಚಿಸಬಹುದಿತ್ತು. ಅಂದು ಅಧ್ಯಕ್ಷರಾಗಿದ್ದ ಎಲ್ ಕೆ ಅಡ್ವಾಣಿ ಅವರು ಯಾವುದೇ ರೀತಿಯ ಆಪಾಯಿಂಟ್ ಮೆಂಟ್ ಇಲ್ಲದೇ ಇದ್ದರೂ ಕಾರ್ಯಕರ್ತರನ್ನು ಭೇಟಿ ಮಾಡಿ ಚರ್ಚಿಸುತ್ತಿದ್ದರು. ಆದರೀಗ ಪಕ್ಷ ಸಂಪೂರ್ಣ ಬದಲಾಗಿದ್ದು, ಸಾಮಾನ್ಯ ಕಾರ್ಯಕರ್ತರನ್ನು ಬಿಡಿ..ಪಕ್ಷದ ಹಿರಿಯ ಮುಖಂಡರಿಗೆ ಭೇಟಿ ಅವಕಾಶ ನೀಡುತ್ತಿಲ್ಲ ಎಂದು ಯಶ್ವಂತ್ ಸಿನ್ಹಾ ಪ್ರಧಾನಿ ಮೋದಿ ಮತ್ತು ಬಿಜೆಪಿ ಅಧ್ಯಕ್ಷ ಅಮಿತ್ ಶಾ ವಿರುದ್ಧ ಕಿಡಿಕಾರಿದ್ದಾರೆ.