ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ಡಾಕ್ಟರೇಟ್

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ಕೋಲ್ಕತ್ತಾ ವಿಶ್ವವಿದ್ಯಾನಿಲಯ ಗೌರವ ಡಾಕ್ಟರೇಟ್ ನೀಡಲಾಗಿದೆ.
ಮಮತಾ ಬ್ಯಾನರ್ಜಿ
ಮಮತಾ ಬ್ಯಾನರ್ಜಿ
Updated on
ಕೋಲ್ಕತ್ತಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ಕೋಲ್ಕತ್ತಾ ವಿಶ್ವವಿದ್ಯಾನಿಲಯ ಗೌರವ ಡಾಕ್ಟರೇಟ್ ನೀಡಲಾಗಿದೆ. 
ಪಶ್ಚಿಮ ಬಂಗಾಳ ರಾಜ್ಯಪಾಲ ಕೇಸರಿನಾಥ್ ತ್ರಿಪಾಠಿ, ಮಮತಾ ಬ್ಯಾನರ್ಜಿ ಅವರಿಗೆ ಡಾಕ್ಟರೇಟ್ ಪ್ರದಾನ ಮಾಡಿದ್ದು, ಮಮತಾ ಬ್ಯಾನರ್ಜಿ ಅವರ ಸಾಮಾಜಿಕ ಕಾರ್ಯಗಳನ್ನು ಗುರುತಿಸಿ ಡಾಕ್ಟರೇಟ್ ನ್ನು ನೀಡಲಾಗಿದೆ. ಗೌರವ ಡಾಕ್ಟರೇಟ್ ಪಡೆದು ಮಾತನಾಡಿರುವ ಮಮತಾ ಬ್ಯಾನರ್ಜಿ, ದೇಶದಲ್ಲಿ ಅಸಹಿಷ್ಣುತೆ ಹೆಚ್ಚಾಗುತ್ತಿದೆ. ಇತಿಹಾಸವನ್ನು ತಿರುಚಬಾರದು, ಭಾರತಕ್ಕೆ ವೈವಿಧ್ಯತೆಯ ಹಿನ್ನೆಲೆ ಇದೆ ಅದನ್ನು ಗೌರವಿಸಬೇಕು ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com