ನ್ಯಾಯಾಂಗದಲ್ಲಿ ಕೇಂದ್ರದ ಅತಿಯಾದ ಹಸ್ತಕ್ಷೇಪ ಪ್ರಜಾಪ್ರಭುತ್ವಕ್ಕೆ ಮಾರಕ: ಮಮತಾ ಬ್ಯಾನರ್ಜಿ

ನ್ಯಾಯಾಂಗದಲ್ಲಿ ಕೇಂದ್ರ ಸರ್ಕಾರದ ಅತಿಯಾದ ಹಸ್ತಕ್ಷೇಪ ಪ್ರಜಾಪ್ರಭುತ್ವಕ್ಕೆ ಮಾರಕ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.
ಮಮತಾ ಬ್ಯಾನರ್ಜಿ
ಮಮತಾ ಬ್ಯಾನರ್ಜಿ
Updated on: 
ನವದೆಹಲಿ: ನ್ಯಾಯಾಂಗದಲ್ಲಿ ಕೇಂದ್ರ ಸರ್ಕಾರದ ಅತಿಯಾದ ಹಸ್ತಕ್ಷೇಪ ಪ್ರಜಾಪ್ರಭುತ್ವಕ್ಕೆ ಮಾರಕ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ. 
ಸುಪ್ರೀಂ ಕೋರ್ಟ್ ನ ನ್ಯಾಯಮೂರ್ತಿಗಳ ಸುದ್ದಿಗೋಷ್ಠಿಯ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಮತಾ ಬ್ಯಾನರ್ಜಿ, ಸುಪ್ರೀಂ ಕೋರ್ಟ್ ಗೆ ಸಂಬಂಧಿಸಿದಂತೆ ಇಂದಿನ ಬೆಳವಣಿಗೆಗಳ ಬಗ್ಗೆ ದುಃಖ ಉಂಟಾಗಿದೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ. 
ನ್ಯಾಯಾಂಗ ಹಾಗೂ ಮಾಧ್ಯಮ ಎರಡೂ ಪ್ರಜಾಪ್ರಭುತ್ವದ ಆಧಾರ ಸ್ತಂಭಗಳು, ನ್ಯಾಯಾಂಗದಲ್ಲಿ ಸರ್ಕಾರದ ಅತಿಯಾದ ಹಸ್ತಕ್ಷೇಪ ಮಾಡುವುದು ಪ್ರಜಾಪ್ರಭುತ್ವಕ್ಕೆ ಮಾರಕವಾಗಲಿದೆ ಎಂದು ಮಮತಾ ಬ್ಯಾನರ್ಜಿ ಟ್ವೀಟ್ ಮಾಡಿ ಅಭಿಪ್ರಾಯ ಹಂಚಿಕೊಂಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com