ಗಡಿಯಲ್ಲಿ ಮತ್ತೆ ಪಾಕ್ ಉದ್ಧಟತನ: ಭಾರತೀಯ ಸೇನೆ ಗುರಿಯಾಗಿರಿಸಿ ಅಪ್ರಚೋದಿತ ಗುಂಡಿನ ದಾಳಿ

ಜಮ್ಮು ಮತ್ತು ಕಾಶ್ಮೀರದ ಗಡಿಯಲ್ಲಿ ಮತ್ತೆ ತನ್ನ ಉದ್ಧಟತನವನ್ನು ಪ್ರದರ್ಶಿಸುತ್ತಿರುವ ಪಾಕಿಸ್ತಾನ, ಉರಿ ಸೆಕ್ಟರ್ ಬಳಿಯಿರುವ ಗಡಿ ನಿಯಂತ್ರಣ ರೇಖೆ ಬಳಿ ಕದನ ವಿರಾಮ ಉಲ್ಲಂಘನೆ ಮಾಡಿದೆ ಎಂದು ಶುಕ್ರವಾರ ತಿಳಿದುಬಂದಿದೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಗಡಿಯಲ್ಲಿ ಮತ್ತೆ ತನ್ನ ಉದ್ಧಟತನವನ್ನು ಪ್ರದರ್ಶಿಸುತ್ತಿರುವ ಪಾಕಿಸ್ತಾನ, ಉರಿ ಸೆಕ್ಟರ್ ಬಳಿಯಿರುವ ಗಡಿ ನಿಯಂತ್ರಣ ರೇಖೆ ಬಳಿ ಕದನ ವಿರಾಮ ಉಲ್ಲಂಘನೆ ಮಾಡಿದೆ ಎಂದು ಶುಕ್ರವಾರ ತಿಳಿದುಬಂದಿದೆ. 
ಉರಿ ಸೆಕ್ಟರ್ ಬಳಿಯಿರುವ ಕಮಲ್ಕೋಟೆ ಪ್ರದೇಶದಲ್ಲಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಭಾರತೀಯ ಸೇನೆಯನ್ನು ಗುರಿಯಾಗಿರಿಸಿಕೊಂಡು ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿದೆ ಎಂದು ಸೇನಾಧಿಕಾರಿಗಳು ಹೇಳಿದ್ದಾರೆ. 
ಪಾಕಿಸ್ತಾನ ಸೇನೆಯ ದಾಳಿಗೆ ಭಾರತೀಯ ಸೇನೆ ದಿಟ್ಟ ಉತ್ತರವನ್ನು ನೀಡಿದ್ದು, ಗುಂಡಿನ ಚಕಮಕಿಯಲ್ಲಿ ಯಾವುದೇ ಸಾವು-ನೋವುಗಳು ಸಂಭವಿಸಿಲ್ಲ ಎಂದು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com