ಜ.8 ರಂದು ಜವಾಹರ್ ನೆಹರು ವಿಶ್ವವಿದ್ಯಾಲಯದ ಆವರಣದಿಂದ ಮುಕುಲ್ ಜೈನ್ ಅವರು ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದರು. ಕಳೆದ ವರ್ಷ ಜೆಎನ್'ಯು ಇಂದ ನಾಪತ್ತೆಯಾಗಿದ್ದ ವಿದ್ಯಾರ್ಥಿ ನಜೀಬ್ ಅಹ್ಮದ್ ಎಲ್ಲಿದ್ದಾನೆಂಬುದು ಈ ವರೆಗೂ ಪತ್ತೆಯಾಗಿಲ್ಲ. ಇದರ ನಡುವಲ್ಲೇ ಮತ್ತೊಬ್ಬ ವಿದ್ಯಾರ್ಥಿ ನಾಪತ್ತೆಯಾಗಿದ್ದ ಹಿನ್ನಲೆಯಲ್ಲಿ ಈ ಪ್ರಕರಣ ಸಾಕಷ್ಟು ಸುದ್ದಿಗೆ ಗ್ರಾಸವಾಗಿತ್ತು.