ನಿತೀಶ್ ಕುಮಾರ್
ನಿತೀಶ್ ಕುಮಾರ್

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಗೆ ಕೊಲೆ ಬೆದರಿಕೆ

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಗೆ ಜೀವ ಬೆದರಿಕೆ ಹಾಕಲಾಗಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಯುವಕನನ್ನು ಬಂಧಿಸಲಾಗಿದೆ.
Published on
ಪಾಟ್ನಾ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಗೆ ಜೀವ ಬೆದರಿಕೆ ಹಾಕಲಾಗಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಯುವಕನನ್ನು ಬಂಧಿಸಲಾಗಿದೆ. 
ಪಾಟ್ನಾದ ಎಸ್ ಪಿ ಈ ಬಗ್ಗೆ ಮಾತನಾಡಿದ್ದು ಪ್ರಮೋದ್ ಕುಮಾರ್ ಎಂಬ ವ್ಯಕ್ತಿಯನ್ನು ಬಂಧಿಸಲಾಗಿದೆ. ಪ್ರಮೋದ್ ಕುಮಾರ್ ಸಾಮಾಜಿಕ ಜಾಲತಾಣದಲ್ಲಿ ಅಪ್ ಲೋಡ್ ಮಾಡಿದ್ದ ವಿಡಿಯೋದಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಅಂಗರಕ್ಷಕರ ಸಮೇತ ಉಡಾಯಿಸುವುದಾಗಿ ಬೆದರಿಕೆ ಹಾಕಿದ್ದ. ಈ ವಿಡಿಯೋ ವೈರಲ್ ಆಗಿತ್ತು. ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಪೊಲೀಸರು ಕ್ರಮ ಕೈಗೊಂಡಿದ್ದು, ಯುವಕನನ್ನು ಬಂಧಿಸಿದ್ದಾರೆ. 
ಉದ್ಯಮಕ್ಕೆ ಸಮಸ್ಯೆಯಾಗುತ್ತಿರುವ ಹಿನ್ನೆಲೆಯಲ್ಲಿ ಆಕ್ರೋಶಗೊಂಡಿದ್ದ ಯುವಕ ನಿತೀಶ್ ಕುಮಾರ್ ವಿರುದ್ಧ ಈ ರೀತಿ ಅಸಮಾಧಾನ ವ್ಯಕ್ತಪಡಿಸಿದ್ದಾನೆ ಎನ್ನಲಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com