ಗುಜರಾತ್ ನ ರಾಜ್ ಕೋಟ್ ಜಿಲ್ಲೆಯ ಪ್ನಾಂಸ್ಲಾ ಗ್ರಾಮದಲ್ಲಿ ಆಯೋಜನೆಯಾಗಿರುವ ರಾಷ್ಟ್ರಕಥಾ ಶಿಬಿರದಲ್ಲಿ ಕಳೆದ ರಾತ್ರಿ ಅಗ್ನಿ ಅವಘಡ ಸಂಭವಿಸಿ, ಶಿಬಿರದಲ್ಲಿ ಪಾಲ್ಗೊಂಡಿದ್ದ ಯುವಕರ ಪೈಕಿ ಮೂವರು ಯುವತಿಯರು ಸಾವನ್ನಪ್ಪಿದ್ದಾರೆ. ಇನ್ನು ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ವಿಚಾರ ತಿಳಿಯುತ್ತಿದ್ದಂತೆಯೇ ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಪ್ರಸ್ತುತ ಬೆಂಕಿಯನ್ನು ನಂದಿಸಿದ್ದಾರೆ.