ಅಕ್ರಮ ಹಣ ವರ್ಗಾವಣೆ: ಚಿದಂಬರಂ ನಿವಾಸದ ಮೇಲೆ ಇಡಿ ದಾಳಿ!

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಶನಿವಾರ ಮಾಜಿ ಕೇಂದ್ರ ಸಚಿವ ಪಿ ಚಿದಂಬರಂ ಮತ್ತು ಅವರ ಪುತ್ರ ಕಾರ್ತಿ ಚಿದಂಬರಂ ಅವರ ನಿವಾಸಗಳ ಮೇಲೆ ದಾಳಿ ನಡೆಸಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಶನಿವಾರ ಮಾಜಿ ಕೇಂದ್ರ ಸಚಿವ ಪಿ ಚಿದಂಬರಂ ಮತ್ತು ಅವರ ಪುತ್ರ ಕಾರ್ತಿ ಚಿದಂಬರಂ ಅವರ ನಿವಾಸಗಳ ಮೇಲೆ ದಾಳಿ ನಡೆಸಿದ್ದಾರೆ.
ಚಿದಂಬರಂ ಮತ್ತು ಅವರ ಪುತ್ರ ಕಾರ್ತಿ ಚಿದಂಬರಂ ಅವರ ಚೆನ್ನೈ ಮತ್ತು ದೆಹಲಿ ನಿವಾಸಗಳ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಇಂದು ಬೆಳಗ್ಗೆ ದಾಳಿ ನಡೆಸಿದ್ದು, ಏರ್ಸೆಲ್-ಮ್ಯಾಕ್ಸಿಸ್ ಪ್ರಕರಣದಲ್ಲಿ ಚಿದಂಬರಂ  ಕುಟುಂಬ ಅಕ್ರಮವಾಗಿ ಹಣ ವರ್ಗಾವಣೆ ಮಾಡಿದೆ ಎಂಬ ಆರೋಪದ ಮೇರೆಗೆ ಅಧಿಕಾರಿಗಳು ಈ ದಾಳಿ ನಡೆಸಿದ್ದಾರೆ ಎನ್ನಲಾಗಿದೆ.
ಇದೇ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಇದೇ ಪ್ರಕರಣ ಸಂಬಂಧ ಕಳೆದ ಡಿಸೆಂಬರ್ 1ರಂದೂ ಕೂಡ ದಾಳಿ ನಡೆಸಿ ಹಲವು ದಾಖಲೆಗಳನ್ನು ವಶಪಡಿಸಿಕೊಂಡಿದ್ದರು. ಅಲ್ಲದೆ ಕಾರ್ತಿ ಅವರಿಗೆ ಸೇರಿದ ಬ್ಯಾಂಕ್ ಖಾತೆ  ಮತ್ತು ಎಪ್‌ಡಿಗಳನ್ನು ಮುಟ್ಟುಗೋಲು ಹಾಕಿಕೊಂಡಿತ್ತು. ಚಿದಂಬರಂ ಅವರು ತಾವು ಕೇಂದ್ರ ಸಚಿವರಾಗಿದ್ದ ಸಂದರ್ಭದಲ್ಲಿ ಅಂದರೆ 2006ರಲ್ಲಿ ವಿದೇಶಿ ಹೂಡಿಕೆ ಪ್ರಚಾರ ಮಂಡಳಿ (ಎಫ್ ಐಪಿಬಿ)ಯಿಂದ ತಮ್ಮ ಪ್ರಭಾವ ಬಳಸಿ ಹಣ  ವರ್ಗಾವಣೆಗೆ ಅನುಮೋದನೆ ಪಡೆದಿದ್ದರು ಎಂದು ಆರೋಪಿಸಲಾಗಿದೆ.
ಕಾರ್ತಿ ಅವರಿಗೆ ಸೇರಿದ ಕಚೇರಿಗಳ ಮೇಲೂ ದಾಳಿ ನಡೆದಿದ್ದು, ಚಿದಂಬರಂ ನಿವಾಸ ಮಾತ್ರವಲ್ಲದೇ ಅವರ ಆಪ್ತರ ನಿವಾಸಗಳ ಮೇಲೂ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎನ್ನಲಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com