ಲಖನೌ: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಕೋಮುಗಲಭೆಗೆ ಪ್ರಚೋದನೆ ನೀಡುತ್ತಿದ್ದಾರೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಶನಿವಾರ ಆರೋಪಿಸಿದ್ದಾರೆ.
ಇತ್ತೀಚಿಗಷ್ಟೇ ಸಿಎಂ ಸಿದ್ದರಾಮಯ್ಯ ನಾನು ಹಿಂದೂ. ಆದರೆ ಮನುಷ್ಯತ್ವ ಇರುವ ಹಿಂದೂ. ಬಿಜೆಪಿಯವರಿಗೆ ಮನುಷ್ಯತ್ವವೇ ಇಲ್ಲ ಎಂದು ವಾಗ್ದಾಳಿ ನಡೆಸಿದ್ದರು.
ಕಳೆದ ಮೂರು ವರ್ಷಗಳಲ್ಲಿ ಕರ್ನಾಟಕದಲ್ಲಿ 12 ಹಿಂದೂಗಳ ಹತ್ಯೆಯಾಗಿದೆ. ಆದರೂ ಸಿದ್ದರಾಮಯ್ಯ ತಮ್ಮನ್ನು ತಾವು ಹಿಂದೂ ಎಂದು ಕರೆದುಕೊಳ್ಳುತ್ತಿದ್ದಾರೆ ಎಂದು ಯೋಗಿ ಆದಿತ್ಯನಾಥ್ ತಿರುಗೇಟು ನೀಡಿದ್ದಾರೆ.
ಹತ್ಯೆಯಾದ ಆ 12 ಹಿಂದೂಗಳ ಭಾವಚಿತ್ರ ಇರುವ ವಿಡಿಯೋವೊಂದನ್ನು ಉತ್ತರ ಪ್ರದೇಶ ಬಿಜೆಪಿ ಟ್ವೀಟ್ ಮಾಡಿದೆ. ಅಲ್ಲದೆ ಕರ್ನಾಟಕದಲ್ಲಿ ಈ ವರ್ಷ 1002 ರೈತರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಮತ್ತು ಸಿಎಂ ಸಿದ್ದರಾಮಯ್ಯ ವಿರುದ್ಧ ಭ್ರಷ್ಟಾಚಾರ ಪ್ರಕರಣ ದಾಖಲಾಗಿದೆ ಎಂದು ವಿಡಿಯೋದಲ್ಲಿ ಆರೋಪಿಸಲಾಗಿದೆ.