ಮೂಲಗಳ ಪ್ರಕಾರ ಇತ್ತೀಚೆಗೆ ಮರದಿಂದ ಬಿದ್ದು ಕಾಲಿಗೆ ಗಾಯ ಮಾಡಿಕೊಂಡು ಜ್ವರದಿಂದ ಬಳಲುತ್ತಿದ್ದ ಆಸಿಫ್, ಚಿಕಿತ್ಸೆ ಪಡೆಯುತ್ತ ಮನೆಯಲ್ಲಿಯೇ ಇದ್ದ. ಶನಿವಾರ ಬೆಳಿಗ್ಗೆ 11ರ ಸುಮಾರಿಗೆ ಸೇಬು ಹಣ್ಣು ತಿನ್ನುವ ವೇಳೆ ಏಕಾಏಕಿ ಕುಸಿದು ಬಿದ್ದು ಆಸಿಫ್ ಅಸ್ವಸ್ಥಗೊಂಡಿದ್ದ. ಕೂಡಲೇ ಪೋಷಕರು ಆಸಿಫ್ ನನ್ನು ಆಸ್ಪತ್ರೆಗೆ ಕರೆದೊಯ್ದರಾದರೂ ಆತ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ. ಇನ್ನು ಮಗನ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಕಿಜರ್ ಅವರು ಈ ಬಗ್ಗೆ ನಗರ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದರು.