ಬಿಜೆಪಿ ವಲಸಿಗ ನೌಕರರನ್ನು ಎರಡನೇ ದರ್ಜೆ ನಾಗರಿಕರನ್ನಾಗಿ ನಡೆಸಿಕೊಳ್ಳುತ್ತಿದೆ: ರಾಹುಲ್ ಗಾಂಧಿ

Published On :
ನವದೆಹಲಿ: ಪಾಸ್ಪೋರ್ಟ್ ಬಣ್ಣವನ್ನು ಬದಲಾವಣೆ ಮಾಡಿರುವ ಕೇಂದ್ರ ಸರ್ಕಾರದ ಕ್ರಮವನ್ನು ಟೀಕಿಸಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಬಿಜೆಪಿ ವಲಸಿಗ ನೌಕರರನ್ನು ಎರಡನೇ ದರ್ಜೆ ನಾಗರಿಕರನ್ನಾಗಿ ನಡೆಸಿಕೊಳ್ಳುತ್ತಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ಪಾಸ್ಪೋರ್ಟ್ ಬಣ್ಣವನ್ನು ಬದಲಾವಣೆ ಮಾಡಿರುವ ಕೇಂದ್ರ ಸರ್ಕಾರದ ಕ್ರಮ ತಾರತಮ್ಯ ನೀತಿಯನ್ನು ತೊರಿಸುತ್ತದೆ ಭಾರತದ ವಲಸಿಗ ನೌಕರರನ್ನು ಬಿಜೆಪಿ ಎರಡನೇ ದರ್ಜೆ ನೌಕರರಂತೆ ನಡೆಸಿಕೊಳ್ಳುವುದನ್ನು ಒಪ್ಪಲು ಸಾಧ್ಯವಿಲ್ಲ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.
ಇಸಿಆರ್ ಸ್ಟೇಟಸ್ ಇರುವ ಪಾಸ್ಪೋರ್ಟ್ ಗಳ ಬಣ್ಣವನ್ನು ನೀಲಿಯಿಂದ ಕಿತ್ತಳೆ ಬಣ್ಣಕ್ಕೆ ಬದಲಾಯಿಸಲು ಕೇಂದ್ರ ಸರ್ಕಾರ ಜ.12 ರಂದು ನಿರ್ಧರಿಸಿತ್ತು. ಸರ್ಕಾರಿ ಅಧಿಕಾರಿಗಳಿಗೆ ಬಿಳಿ ಬಣ್ಣದ ಪಾಸ್ಪೋರ್ಟ್, ರಾಜತಾಂತ್ರಿಕ ಅಧಿಕಾರಿಗಳಿಗೆ ಕೆಂಪುಬಣ್ಣದ ಪಾಸ್ಪೋರ್ಟ್, ಹಾಗೂ ಸಾಮಾನ್ಯ ಜನರಿಗೆ ನೀಲಿ ಬಣ್ಣದ ಪಾಸ್ಪೋರ್ಟ್ ನ್ನು ನೀಡಲಾಗುತ್ತಿದೆ. ಈಗ ವಲಸೆ ಹೋಗುವ ನಾಗರಿಕರಿಗೆ ಕಿತ್ತಳೆ ಬಣ್ಣದ ಪಾಸ್ಪೋರ್ಟ್ ನ್ನು ನೀಡಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


