ಮೀರತ್: ಘಾಜಿಯಾಬಾದ್ ನ ಮೊಡಿನಗರ್ ಪ್ರದೇಶದ ಪಾದ್ರಿ ಮಗಳನ್ನು ಅಪಹರಿಸಿ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ನಂತರ ಆಕೆಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಕೆಲ ದಿನಗಳ ಹಿಂದೆ ನಾಪತ್ತೆಯಾಗಿದ್ದ 15 ವರ್ಷದ ಬಾಲಕಿಯ ಶವ ಪಾರ್ತಪುರ್ ಪ್ರದೇಶದ ಗದ್ದೆಯಲ್ಲಿ ಪತ್ತೆಯಾಗಿದೆ. ಬಾಲಕಿಯ ದೇಹದ ಮೇಲೆ ಸಿಗರೇಟಿನಿಂದ ಸುಟ್ಟ ಗಾಯಗಳು ಪತ್ತೆಯಾಗಿವೆ.
ಇನ್ನು ಮಗಳು ನಾಪತ್ತೆಯಾಗಿರುವ ಬಗ್ಗೆ ಪಾದ್ರಿ ಮೊಡಿನಗರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣದ ತನಿಖೆಗೆ ಹಲವು ತಂಡಗಳನ್ನು ರಚಿಸಲಾಗಿದ್ದು ಶೀಘ್ರದಲ್ಲಿಯೇ ಆರೋಪಿಗಳನ್ನು ಬಂಧಿಸುತ್ತೇವೆ ಎಂದು ಘಾಜಿಯಾಬಾದ್ ನ ಗ್ರಾಮೀಣ ಪೊಲೀಸ್ ವರಿಷ್ಠಾಧಿಕಾರಿ ಅರವಿಂದ್ ಕುಮಾರ್ ಮೌರ್ಯ ತಿಳಿಸಿದ್ದಾರೆ.
ಇನ್ನು ಬಾಲಕಿ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಬಲಪಂಥೀಯ ಸಂಘಟನೆಯ ಕೈವಾಡ ಇದೆ ಎಂದು ಆರೋಪಿಸಿರುವ ಸ್ಥಳೀಯರು ಶನಿವಾರ ಬೃಹತ್ ಪ್ರತಿಭಟನೆ ನಡೆಸಲು ಮುಂದಾಗಿದ್ದರು.