ಪ್ರಧಾನಿ ಮೋದಿ ತಮ್ಮ ಕಾರ್ಯಗಳಿಂದ ಮುಸಲ್ಮಾನರಿಗೆ ತೊಂದರೆ ನೀಡುತ್ತಿದ್ದಾರೆ: ಲಾಲೂ ಪ್ರಸಾದ್ ಯಾದವ್

ಮೇವು ಹಗರಣ ಕೇಸಿಗೆ ಸಂಬಂಧಪಟ್ಟಂತೆ ಮೂರೂವರೆ ವರ್ಷಗಳ ಕಾಲ ಜೈಲು ಶಿಕ್ಷೆಗೆ ...
ಲಾಲೂ ಪ್ರಸಾದ್ ಯಾದವ್
ಲಾಲೂ ಪ್ರಸಾದ್ ಯಾದವ್
ಪಾಟ್ನಾ: ಮೇವು ಹಗರಣ ಕೇಸಿಗೆ ಸಂಬಂಧಪಟ್ಟಂತೆ ಮೂರೂವರೆ ವರ್ಷಗಳ ಕಾಲ ಜೈಲು ಶಿಕ್ಷೆಗೆ ಗುರಿಯಾಗಿರುವ ರಾಷ್ಟ್ರೀಯ ಜನತಾ ದಳ(ಆರ್ ಜೆಡಿ) ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್, ಇಂದು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಹರಿಹಾಯ್ದಿದ್ದಾರೆ.
ಹಜ್ ಯಾತ್ರಿಕರಿಗೆ ಸಬ್ಸಿಡಿಯನ್ನು ತೆಗೆದುಹಾಕಿರುವುದಕ್ಕೆ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿರುದ್ಧ ಟೀಕಾಪ್ರಹಾರ ನಡೆಸಿದ ಅವರು, ತಮ್ಮ ಕ್ರಮಗಳಿಂದ ಮೋದಿಯವರು ಈ ದೇಶದ ಮುಸಲ್ಮಾನರಿಗೆ ತೊಂದರೆಯನ್ನುಂಟುಮಾಡುತ್ತಿದ್ದಾರೆ ಎಂದರು.
ಇನ್ನೊಂದು ಮೇವು ಹಗರಣ ಕೇಸಿಗೆ ಸಂಬಂಧಪಟ್ಟ ತನಿಖೆಗೆ ನ್ಯಾಯಾಲಯಕ್ಕೆ ಇಂದು ವಿಚಾರಣೆಗೆ ಹಾಜರಾದ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿ ಈ ಪ್ರತಿಕ್ರಿಯೆ ನೀಡಿದ್ದಾರೆ.
ವಿಶ್ವ ಹಿಂದೂ ಪರಿಷತ್ ಅಂತಾರಾಷ್ಟ್ರೀಯ ಕಾರ್ಯಾಧ್ಯಕ್ಷ ಪ್ರವೀಣ್ ತೊಗಾಡಿಯಾ ವಿರುದ್ಧ ಕೂಡ ಆರೋಪಿಸಿದ ಲಾಲೂ ಪ್ರಸಾದ್ ಯಾದವ್, ತಮ್ಮ ಝಡ್ ಪ್ಲಸ್ ಭದ್ರತೆಯನ್ನು ಬಿಟ್ಟು ತೊಗಾಡಿಯಾ ಎಲ್ಲಿ ಹೋಗಿದ್ದರು ಎಂದು ಪ್ರಶ್ನಿಸಿದರು. ಅರೆ ಪ್ರಜ್ಞಾವಸ್ಥೆ ಸ್ಥಿತಿಯಲ್ಲಿ ಕಾಣುವ ಮೊದಲು ಎಲ್ಲಿ ಕಣ್ಮರೆಯಾಗಿದ್ದರು ಎಂದು ಹೇಳಲಿ ಎಂದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com