ಸಚಿವ ಗುರುಜಿತ್ ಸಿಂಗ್ ರಾಜಿನಾಮೆ ಅಂಗೀಕರಿಸಿದ ಪಂಜಾಬ್ ಸಿಎಂ

ಭ್ರಷ್ಟಾಚಾರ ಆರೋಪದ ಹಿನ್ನೆಲೆಯಲ್ಲಿ ಸಂಪುಟ ದರ್ಜೆಯ ಸಚಿವರಾದ ರಾಣಾ ಗುರುಜಿತ್ ಸಿಂಗ್ ಅವರು ತಮ್ಮ ಸಚಿವ ಸ್ಥಾನಕ್ಕೆ ನೀಡಿದ್ದ ರಾಜಿನಾಮೆಯನ್ನು...
ಅಮರಿಂದರ್ ಸಿಂಗ್
ಅಮರಿಂದರ್ ಸಿಂಗ್
ನವದೆಹಲಿ: ಭ್ರಷ್ಟಾಚಾರ ಆರೋಪದ ಹಿನ್ನೆಲೆಯಲ್ಲಿ ಸಂಪುಟ ದರ್ಜೆಯ ಸಚಿವರಾದ ರಾಣಾ ಗುರುಜಿತ್ ಸಿಂಗ್ ಅವರು ತಮ್ಮ ಸಚಿವ ಸ್ಥಾನಕ್ಕೆ ನೀಡಿದ್ದ ರಾಜಿನಾಮೆಯನ್ನು ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರು ಗುರುವಾರ ಅಂಗೀಕರಿಸಿದ್ದಾರೆ.
ಇಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅಮರಿಂದರ್ ಸಿಂಗ್ ಅವರು, ಗುರುಜಿತ್ ಸಿಂಗ್ ಅವರ ರಾಜಿನಾಮೆ ಅಂಗೀಕರಿಸಿರುವುದಾಗಿ ತಿಳಿಸಿದ್ದಾರೆ.
ಕಪೂರ್ತಾಲ ಶಾಸಕರಾಗಿರುವ ಗುರುಜಿತ್ ಅವರು, ಅಮರಿಂದರ್ ಸಿಂಗ್ ಸಂಪುಟದಲ್ಲಿ ಇಂಧನ ಮತ್ತು ನೀರಾವರಿ ಸಚಿವರಾಗಿದ್ದರು. 
ಮರಳು ಗಣಿಗಾರಿಕೆ ಗುತ್ತಿಗೆ ನೀಡುವಲ್ಲಿ ನಡೆದಿರುವ ಭ್ರಷ್ಟಾಚಾರದಲ್ಲಿ ಗುರುಜಿತ್ ಸಿಂಗ್ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿದ್ದ ಪ್ರತಿಪಕ್ಷಗಳು, ಸಚಿವರ ರಾಜಿನಾಮೆಗೆ ಆಗ್ರಹಿಸಿದ್ದವು. ಈ ಹಿನ್ನೆಲೆಯಲ್ಲಿ ಕಳೆದ ಮಂಗಳವಾರ ಗುರುಜಿತ್ ಅವರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com