ಥಾಣೆ: ಥಾಣೆಯ ನೌಪಾದ ಪ್ರದೇಶದಲ್ಲಿರುವ ಬಹುಮಹಡಿ ವಸತಿ ಗೃಹದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು 150 ಜನರನ್ನು ಸುರಕ್ಷಿತವಾಗಿ ತೆರವುಗೊಳಿಸಲಾಗಿದೆ. .ಮಹಾರಾಷ್ಟ್ರದ ಥಾಣೆ ನಗರದ ಗಿರಿರಾಜ್ ಬಿಲ್ಡೀಂಗ್ ನ ನಾಲ್ಕನೇ ಮಹಡಿಯ ವಿದ್ಯುತ್ ಕೊಳವೆಯಲ್ಲಿ ಬೆಂಕಿ ಕಾಣಿಸಿಕೊಂಡಿತು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. .ಅಗ್ನಿ ಅವಘಡ ಸಂಭವಿಸುತ್ತಿದ್ದಂತೆ ಘಟನಾ ಸ್ಥಳಕ್ಕೆ ದೌಡಾಯಿಸಿದ 70 ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. .ನಾಲ್ಕನೇ ಮಹಡಿಯಲ್ಲಿ ಕಾಣಿಸಿಕೊಂಡು ಬೆಂಕಿ ನಂತರ 26ನೇ ಮಹಡಿವರೆಗೂ ವ್ಯಾಪಿಸಿದೆ. ಸದ್ಯ ಅಗ್ನಿ ದುರಂತದಲ್ಲಿ ಯಾವುದೇ ಸಾವು ನೋವು ಸಂಭವಿಸಿದ ವರದಿಯಾಗಿಲ್ಲ. .Follow KannadaPrabha channel on WhatsApp KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ Subscribe to KannadaPrabha YouTube Channel and watch Videos