ಗುಜರಾತ್ ಮಾಜಿ ಸಿಎಂ ಆನಂದಿ ಬೆನ್ ಪಟೇಲ್ ಈಗ ಮಧ್ಯಪ್ರದೇಶದ ರಾಜ್ಯಪಾಲೆ!

ಗುಜರಾತ್ ನ ಮಾಜಿ ಸಿಎಂ ಆನಂದಿ ಬೆನ್ ಪಟೇಲ್ ಅವರನ್ನು ಮಧ್ಯಪ್ರದೇಶದ ರಾಜ್ಯಪಾಲರನ್ನಾಗಿ ನೇಮಕ ಮಾಡಲಾಗಿದೆ.
ಆನಂದಿ ಬೆನ್ ಪಟೇಲ್
ಆನಂದಿ ಬೆನ್ ಪಟೇಲ್
Updated on
ಗಾಂಧಿನಗರ: ಗುಜರಾತ್ ನ ಮಾಜಿ ಸಿಎಂ ಆನಂದಿ ಬೆನ್ ಪಟೇಲ್ ಅವರನ್ನು ಮಧ್ಯಪ್ರದೇಶದ ರಾಜ್ಯಪಾಲರನ್ನಾಗಿ ನೇಮಕ ಮಾಡಲಾಗಿದೆ. 
ಗುಜರಾತ್ ನ ಬಿಜೆಪಿ ವಕ್ತಾರ ಭರತ್ ಪಾಂಡ್ಯ ಮಾಜಿ ಸಿಎಂ ಆನಂದಿ ಬೆನ್ ಪಟೇಲ್ ಅವರಿಗೆ ಅಭಿನಂದನೆ ಸಲ್ಲಿಸಿದ್ದು, ಅಧಿಕೃತ ಟ್ವಿಟರ್ ಖಾತೆಯಲ್ಲಿ ಈ ಮಾಹಿತಿ ಬಹಿರಂಗವಾಗಿದೆ. ತೆರವುಗೊಂಡಿದ್ದ ಮಧ್ಯಪ್ರದೇಶದ ರಾಜ್ಯಪಾಲರ ಹುದ್ದೆಗೆ ಗುಜರಾತ್ ರಾಜ್ಯಪಾಲರಾಗಿರುವ ಒಪಿ ಕೊಹ್ಲಿ ಅವರಿಗೆ ಹೆಚ್ಚುವರಿ ಹೊಣೆ ನೀಡಲಾಗಿತ್ತು. ಈಗ ಪೂರ್ಣಪ್ರಮಾಣದಲ್ಲಿ ಆನಂದಿ ಬೆನ್ ಪಟೇಲ್ ಮಧ್ಯಪ್ರದೇಶದ ರಾಜ್ಯಪಾಲರಾಗಲಿದ್ದಾರೆ. 
2016 ರ ಆಗಸ್ಟ್ ನಲ್ಲಿ ಮುಖ್ಯಮಂತ್ರಿ ಪದವಿಗೆ ರಾಜೀನಾಮೆ ನೀಡಿದ್ದ ಆನಂದಿ ಬೆನ್ ಪಟೇಲ್ 2017 ರ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ನಿರಾಕರಿಸಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com