ಕಾಶ್ಮೀರದಲ್ಲಿ ಶಾಂತಿ ಸ್ಥಾಪಿಸಲು ಭಾರತ, ಪಾಕ್ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕು: ಒಮರ್ ಅಬ್ದುಲ್ಲಾ

ಕಾಶ್ಮೀರ ಕಣಿವೆಯಲ್ಲಿ ಶಾಂತಿ ಸ್ಥಾಪಿಸಲು ಭಾರತ ಮತ್ತು ಪಾಕಿಸ್ತಾನ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕೆಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ಶುಕ್ರವಾರ ಹೇಳಿದ್ದಾರೆ...
ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ
ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ
Updated on: 
ಜಮ್ಮು: ಕಾಶ್ಮೀರ ಕಣಿವೆಯಲ್ಲಿ ಶಾಂತಿ ಸ್ಥಾಪಿಸಲು ಭಾರತ ಮತ್ತು ಪಾಕಿಸ್ತಾನ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕೆಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ಶುಕ್ರವಾರ ಹೇಳಿದ್ದಾರೆ. 
ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೇನೆ ಪದೇ ಪದೇ ಕದನ ವಿರಾಮ ಉಲ್ಲಂಘನೆ ಮ ಮಾಡುತ್ತಿದ್ದು, ಇಂದು ಪಾಕಿಸ್ತಾನದ ಉದ್ಧಟನಕ್ಕೆ ಗಡಿಯಲ್ಲಿ 11 ಮಂದಿ ನಾಗರೀಕರು ಗಾಯಗೊಂಡಿದ್ದಾರೆ. 
ಈ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಒಮರ್ ಅಬ್ದುಲ್ಲಾ, ಗಡಿಯಲ್ಲಿ ಪಾಕಿಸ್ತಾನ ನಾಗರೀಕರನ್ನು ಗುರಿಯಾಗಿರಿಸಿಕೊಂಡು ಅಪ್ರಚೋದಿತನ ಗುಂಡಿನ ದಾಳಿ ನಡೆಸುತ್ತಿರುವುದು ಅತ್ಯಂತ ಗಂಭೀರವಾಗ ವಿಚಾರವಾಗಿದೆ. ಕಾಶ್ಮೀರ ಕಣಿವೆಯಲ್ಲಿ ಶಾಂತಿ ಸ್ಥಾಪಿಸಲು ಭಾರತ ಮತ್ತು ಪಾಕಿಸ್ತಾನ ಒಗ್ಗಟ್ಟಿನಿಂದ ಕೆಲಸ ಮಾಡಬೇಕಿದೆ ಎಂದು ಹೇಳಿದ್ದಾರೆ. 
ಕಾಶ್ಮೀರ ಸಮಸ್ಯೆಗೆ ಹಿಂಸಾಚಾರ ಸೃಷ್ಟಿಯೇ ಪರಿಹಾರವಲ್ಲ. ಭಾರತ ಮತ್ತು ಪಾಕಿಸ್ತಾನ ಮಾತುಕತೆ ನಡೆಸುವ ಅಗತ್ಯವಿದೆ. ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಬಳಿ ಪ್ರತೀದಿನ ಕದನ ವಿರಾಮ ಉಲ್ಲಂಘನೆಯಾಗುತ್ತಿದೆ. ಇಂತಹ ಸಮಸ್ಯೆಯನ್ನು ನವದೆಹಲಿ ಹಾಗೂ ಇಸ್ಲಾಮಾಬಾದ್ ಪರಿಹರಿಸಬೇಕಿದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com