ಉಗ್ರರಿಗೆ ಆರ್ಥಿಕ ನೆರವು ಪ್ರಕರಣ: ಉಗ್ರ ಸಲಾಹುದ್ದೀನ್‌ ಪುತ್ರನ ನ್ಯಾಯಾಂಗ ಬಂಧನ ವಿಸ್ತರಣೆ

ಉಗ್ರರಿಗೆ ಆರ್ಥಿಕ ನೆರವು ನೀಡಿದ ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿರುವ ಹಿಜ್ಬುಲ್ ಮುಜಾಹಿದೀನ್ ಉಗ್ರ ಸಂಘಟನೆಯ ಮುಖ್ಯಸ್ಥ ಸಯ್ಯದ್...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ನವದೆಹಲಿ: ಉಗ್ರರಿಗೆ ಆರ್ಥಿಕ ನೆರವು ನೀಡಿದ ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿರುವ ಹಿಜ್ಬುಲ್ ಮುಜಾಹಿದೀನ್ ಉಗ್ರ ಸಂಘಟನೆಯ ಮುಖ್ಯಸ್ಥ ಸಯ್ಯದ್ ಸಲಾಹುದ್ದೀನ್‌ ಪುತ್ರ ಸಯ್ಯದ್ ಶಾಹಿದ್ ನ ನ್ಯಾಯಾಂಗ ಬಂಧನ ಅವಧಿಯನ್ನು ಶುಕ್ರವಾರ ದೆಹಲಿ ಕೋರ್ಟ್ ಫೆಬ್ರವರಿ 5ರ ವರೆಗೆ ವಿಸ್ತರಿಸಿದೆ.
ಜಮ್ಮು ಮತ್ತು ಕಾಶ್ಮೀರದ ಸರ್ಕಾರಿ ನೌಕರನಾಗಿದ್ದ ಶಾಹಿದ್ ನನ್ನು ಕಳೆದ ವರ್ಷ ಅಕ್ಟೋಬರ್ 24ರಂದು ರಾಷ್ಟ್ರೀಯ ತನಿಖಾ ದಳ(ಎನ್ಐಎ)ದ ಅಧಿಕಾರಿಗಳು ದೆಹಲಿಯಲ್ಲಿ ಬಂಧಿಸಿದ್ದರು. ಆರೋಪಿಯನ್ನು ಇಂದು ವಿಡಿಯೋ ಕಾನ್ಫೆರೆನ್ಸ್ ಮೂಲಕ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಧೀಶ ಓ ಪಿ ಸೈನಿ ಅವರು, ನ್ಯಾಯಾಂಗ ಬಂಧನ ಅವಧಿಯನ್ನು ಫೆಬ್ರವರಿ 5ರ ವರೆಗೆ ವಿಸ್ತರಿಸಿ ಆದೇಶ ಹೊರಡಿಸಿದ್ದಾರೆ.
2011 ರಿಂದ 2014ರ ನಡುವೆ ಸಯ್ಯದ್ ಶಾಹಿದ್ ಸಿರಿಯಾ ಮೂಲದ ಗುಲಾಮ್ ಮೊಹಮ್ಮದ್ ಭಟ್ ಗೆ ಹಣ ವರ್ಗಾವಣೆ ಮಾಡಿರುವುದು ತನಿಖೆ ವೇಳೆ ಬಹಿರಂಗವಾಗಿದೆ ಎಂದು ಎನ್ ಐಎ ತನಿಖಾಧಿಕಾರಿಗಳು ತಿಳಿಸಿದ್ದಾರೆ.
2011ರ ಉಗ್ರರಿಗೆ ಆರ್ಥಿಕ ನೆರವು ಪ್ರರಕರಣಕ್ಕೆ ಸಂಬಂಧಿಸಿದೆ ಎನ್ಐಎ ಅಧಿಕಾರಿಗಳು ಶಾಹಿದ್ ಸೇರಿದಂತೆ ಆರು ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com