ಹುತಾತ್ಮ ಯೋಧ ಜಗ್ಪಾಲ್ ಸಿಂಗ್'ಗೆ ರೂ.25 ಲಕ್ಷ ಪರಿಹಾರ ಘೋಷಿಸಿದ ಸಿಎಂ ಯೋಗಿ ಆದಿತ್ಯನಾಥ್
ಗಡಿಯಲ್ಲಿ ಪಾಕಿಸ್ತಾನದ ಅಪ್ರಚೋದಿತ ಗುಂಡಿನ ದಾಳಿಗೆ ಹುತಾತ್ಮರಾದ ಯೋಧ ಜಗ್ಪಾಲ್ ಸಿಂಗ್ ಅವರಿಗೆ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ರೂ.25 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ...
ಲಖನೌ: ಗಡಿಯಲ್ಲಿ ಪಾಕಿಸ್ತಾನದ ಅಪ್ರಚೋದಿತ ಗುಂಡಿನ ದಾಳಿಗೆ ಹುತಾತ್ಮರಾದ ಯೋಧ ಜಗ್ಪಾಲ್ ಸಿಂಗ್ ಅವರಿಗೆ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ರೂ.25 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ.
ಜಮ್ಮು ಮತ್ತು ಕಾಶ್ಮೀರ ಸಾಂಬಾ ಸೆಕ್ಟರ್ ಬಳಿ ಪಾಕಿಸ್ತಾನ ಸೇನೆ ಕದನ ವಿರಾಮ ಉಲ್ಲಂಘನೆ ಮಾಡಿತ್ತು. ಈ ವೇಳೆ ಭಾರತೀಯ ಸೇನೆಯನ್ನು ಗುರಿಯಾಗಿರಿಸಿಕೊಂಡು ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದ ಪರಿಣಾಮ ಗಡಿ ಭದ್ರತಾ ಪಡೆಯ ಮುಖ್ಯ ಪೇದೆ ಜಗ್ಪಾಲ್ ಸಿಂಗ್ ಅವರು ಹುತಾತ್ಮರಾಗಿದ್ದರು.
ಗಡಿಯಲ್ಲಿ ನಿನ್ನೆ ಪಾಕಿಸ್ತಾನ ನಡೆಸಿದ್ದ ಅಪ್ರಚೋದಿತ ಗುಂಡಿನ ದಾಳಿಗೆ ಇಬ್ಬರು ನಾಗರೀಕರು ಸಾವನ್ನಪ್ಪಿದ್ದರು. ಅಲ್ಲದೆ 11 ಮಂದಿ ಗಂಭೀರವಾಗಿ ಗಾಯಗೊಂಡಿದ್ದರು.