ಸ್ವಾಮಿ ವಿವೇಕಾನಂದ, ನೇತಾಜಿ ಜನ್ಮದಿನವನ್ನೂ ರಾಷ್ಟ್ರೀಯ ರಜಾದಿನವಾಗಿ ಘೋಷಿಸಿ: ಕೇಂದ್ರಕ್ಕೆ ಮಮತಾ ಒತ್ತಾಯ

ಸ್ವಾಮಿ ವಿವೇಕಾನಂದ ಮತ್ತು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮ ದಿನಗಳನ್ನೂ ಕೂಡ ರಾಷ್ಟ್ರೀಯ ರಜಾದಿನವಾಗಿ ಘೋಷಣೆ ಮಾಡಬೇಕು ಎಂದು ಶನಿವಾರ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಒತ್ತಾಯಿಸಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ನವದೆಹಲಿ: ಸ್ವಾಮಿ ವಿವೇಕಾನಂದ ಮತ್ತು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮ ದಿನಗಳನ್ನೂ ಕೂಡ ರಾಷ್ಟ್ರೀಯ ರಜಾದಿನವಾಗಿ ಘೋಷಣೆ ಮಾಡಬೇಕು ಎಂದು ಶನಿವಾರ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ  ಬ್ಯಾನರ್ಜಿ ಒತ್ತಾಯಿಸಿದ್ದಾರೆ.
ಈ ಬಗ್ಗೆ ಟ್ವಿಟರ್ ನಲ್ಲಿ ಕೇಂದ್ರಸರ್ಕಾರಕ್ಕೆ ಒತ್ತಾಯಿಸಿರುವ ಮಮತಾ ಬ್ಯಾನರ್ಜಿ ಅವರು, ಸ್ವಾಮಿ ವಿವೇಕಾನಂದ ಮತ್ತು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ದೇಶ ಮತ್ತು ಆತಾರಾಷ್ಟೀಯ ಆದರ್ಶ ವ್ಯಕ್ತಿಗಳಾಗಿದ್ದು, ಅವರ  ಜೀವನ ನಮಗೆ ಸದಾ  ಸ್ಪೂರ್ತಿದಾಯಕ.. ಹೀಗಾಗಿ ಅವರ ಜನ್ಮದಿನವನ್ನು ರಾಷ್ಟ್ರೀಯ ರಜಾದಿನವಾಗಿ ಘೋಷಣೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.
ಅಲ್ಲದೆ ಈ ಸಂಬಂಧ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯುವುದಾಗಿ ಹೇಳಿರುವ ಮಮತಾ ಬ್ಯಾನರ್ಜಿ ಅವರು, ಸ್ವಾಮಿ ವಿವೇಕಾನಂದ ಅವರ ಜನ್ಮದಿನಾಚರಣೆಯಾಗಿರುವ ಜನವರಿ 12 ಮತ್ತು ನೇತಾಜಿ ಸುಭಾಷ್ ಚಂದ್ರ ಬೋಸ್  ಅವರ ಜನ್ಮ ದಿನಾಚರಣೆಯಾಗಿರುವ ಜನವರಿ 23ರಂದು ರಾಷ್ಟ್ರೀಯ ರಜಾದಿನ ಘೋಷಿಸಬೇಕು ಎಂದು ಒತ್ತಾಯಿಸುತ್ತೇನೆ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com