ಕೇರಳ: ಎಬಿವಿಪಿ ಕಾರ್ಯಕರ್ತನ ಹತ್ಯೆ, ನಾಲ್ವರು ಎಸ್‌ಡಿಪಿಐ ಕಾರ್ಯಕರ್ತರ ಬಂಧನ

ರಾಷ್ಟ್ರೀಯ ಸ್ವಯಂಸೇವಾ ಸಂಘ(ಆರ್ಎಸ್ಎಸ್) ಹಾಗೂ ಎಬಿವಿಪಿ ಕಾರ್ಯಕರ್ತ ಶ್ಯಾಮಪ್ರಸಾದ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೆರವೂರ್ ಪೊಲೀಸರು ನಾಲ್ವರು...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on
ಕಣ್ಣೂರ್: ರಾಷ್ಟ್ರೀಯ ಸ್ವಯಂಸೇವಾ ಸಂಘ(ಆರ್ಎಸ್ಎಸ್) ಹಾಗೂ ಎಬಿವಿಪಿ ಕಾರ್ಯಕರ್ತ ಶ್ಯಾಮಪ್ರಸಾದ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೆರವೂರ್ ಪೊಲೀಸರು ನಾಲ್ವರು ಎಸ್‌ಡಿಪಿಐ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. 
ಬಂಧಿತ ಆರೋಪಿಗಳನ್ನು ಮುಹಮ್ಮದ್(20), ಸಲೀಂ(26), ಸಮೀರ್(25) ಹಶೀಂ(24) ಎಂದು ಗುರುತಿಸಲಾಗಿದೆ. ಇನ್ನು ಮುಹಮ್ಮದ್ ಸಿಪಿಎಂ ಕಕ್ಕಯಾಂಗಡು ಬ್ರಾಂಚ್ ನ ಕಾರ್ಯದರ್ಶಿ ನರೋಥ್ ದಿಲೀಪನ್ ಕೊಲೆ ಪ್ರಕರಣದ ಆರೋಪಿಯಾಗಿದ್ದಾನೆ. 
ಶುಕ್ರವಾರ ಸಂಜೆ 5.30ರ ಸುಮಾರಿ 24 ವರ್ಷದ ಶ್ಯಾಮ್ ಪ್ರಸಾದ್ ಕೊಮ್ಮಾರಿಯ ಕನ್ನಾವಾಮ್ ಬಳಿ ಬೈಕ್ ನಲ್ಲಿ ಹೋಗುತ್ತಿದ್ದಾಗ ಅವರ ಮೇಲೆ ಮುಸುಕುಧಾರಿಗಳು ದಾಳಿ ನಡೆಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದರು. ಈ ಸಂಬಂಧ ಕೊಲೆಯಾದ ಎರಡು ಗಂಟೆಯಲ್ಲೇ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com