ಜಮ್ಮು-ಕಾಶ್ಮೀರ; ಮತ್ತೆ ಕದನ ವಿರಾಮ ಉಲ್ಲಂಘಿಸಿದ ಪಾಕ್, ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ

ಜಮ್ಮು ಮತ್ತು ಕಾಶ್ಮೀರ ಗಡಿ ನಿಯಂತ್ರಣ ರೇಕೆ ಹಾಗೂ ಅಂತರಾಷ್ಟ್ರೀಯ ಗಡಿ ಬಳಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಗಡಿ ಭಾಗದಲ್ಲಿರುವ ಶಾಲೆಗಳನ್ನು ಬಂದ್ ಮಾಡುವಂತೆ ಅಧಿಕಾರಿಗಳು...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಜಮ್ಮು: ಜಮ್ಮು ಮತ್ತು ಕಾಶ್ಮೀರ ಗಡಿ ನಿಯಂತ್ರಣ ರೇಕೆ ಹಾಗೂ ಅಂತರಾಷ್ಟ್ರೀಯ ಗಡಿ ಬಳಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಗಡಿ ಭಾಗದಲ್ಲಿರುವ ಶಾಲೆಗಳನ್ನು ಬಂದ್ ಮಾಡುವಂತೆ ಅಧಿಕಾರಿಗಳು ಆದೇಶಿಸಿದ್ದಾರೆಂದು ಶನಿವಾರ ತಿಳಿದುಬಂದಿದೆ. 
ಗಡಿ ನಿಯಂತ್ರಣ ರೇಖೆ ಹಾಗೂ ಅಂತರಾಷ್ಟ್ರೀಯ ಗಡಿಯಿಂದ 5 ಕಿ.ಮೀ ದೂರದಲ್ಲಿರುವ ಎಲ್ಲಾ ಶಾಲೆಗಳನ್ನು ಬಂದ್ ಮಾಡುವಂತೆ ಆದೇಶಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 
ನಿನ್ನೆಯಷ್ಟೇ ಗಡಿಯಲ್ಲಿ ಕದನ ವಿರಾಮ ಉಲ್ಲಂಘನೆ ಮಾಡಿದ್ದ ಪಾಕಿಸ್ತಾನ, ಗಡಿ ಭಾಗದ ನಾಗರೀಕರು ಹಾಗೂ ಸೇನೆಯನ್ನು ಗುರಿಯಾಗಿರಿಸಿಕೊಂಡು ಅಪ್ರಚೋದಿತ ಗುಂಡಿನ ದಾಳಿ ನಡೆಸಿತ್ತು. ಈ ವೇಳೆ ಇಬ್ಬರು ಯೋಧರು ಹುತಾತಾತ್ಮರಾಗಿ, ಇಬ್ಬರು ನಾಗರೀಕರು ಸಾವನ್ನಪ್ಪಿದ್ದರು. 
ಇಂದೂ ಕೂಡ ಪಾಕಿಸ್ತಾನ ತನ್ನ ಉದ್ಧಟತನವನ್ನು ಪ್ರದರ್ಶಿಸಿದ್ದು, ಜಮ್ಮು ಮತ್ತು ಕಾಶ್ಮೀರ ಅಖ್ನೂರ್ ಪ್ರದೇಶದ ಬಳಿ ಕದನ ವಿರಾಮವನ್ನು ಉಲ್ಲಂಘನೆ ಮಾಡಿದೆ. ಗಡಿಯಲ್ಲಿ ಭಾರತೀಯ ಸೇನೆಯನ್ನು ಗುರಿಯಾಗಿರಿಸಿಕೊಂಡು ಪಾಕಿಸ್ತಾನ ಮಾರ್ಟರ್ ಶೆಲ್ ಗಳು ಹಾಗೂ ಸಣ್ಣ ಶಸ್ತ್ರಾಸ್ತ್ರಗಳ ಮೂಲಕ ದಾಳಿಗಳನ್ನು ನಡೆಸುತ್ತಿದೆ. ಪ್ರಸ್ತುತ ಗಡಿಯಲ್ಲಿ ಗುಂಡಿನ ಚಕಮಕಿ ಮುಂದುವರೆಯುತ್ತಿದೆ ಎಂದು ವರದಿಗಳು ತಿಳಿಸಿವೆ. 

ಜಮ್ಮು ಮತ್ತು ಕಾಶ್ಮೀರ ಆರ್ ಎಸ್ ಪುರ, ಕನಚಕ್ ಮತ್ತು ಪರ್ಗ್ವಾಲ್ ಸೆಕ್ಟರ್ ಗಳ ನಾಗರೀಕ ಪ್ರದೇಶ ಹಾಗೂ ಭಾರತೀಯ ಸೇನಾ ನೆಲೆಗಳನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನ ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿದ್ದು, ದಾಳಿಗೆ ಭಾರತೀಯ ಸೇನೆ ದಿಟ್ಟ ಉತ್ತರವನ್ನು ನೀಡುತ್ತಿದೆ ಎಂದು ತಿಳಿದುಬಂದಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com