ಮೋದಿ ಮನ್ ಕೀ ಬಾತ್ ನಲ್ಲಿ ಮೂರು ವಿಷಯ ಹಂಚಿಕೊಳ್ಳುವಂತೆ ರಾಹುಲ್ ಗಾಂಧಿ ಟಾಂಗ್

ಪ್ರಧಾನಮಂತ್ರಿ ನರೇಂದ್ರಮೋದಿ ಅವರ ಆಕಾಶವಾಣಿ ಕಾರ್ಯಕ್ರಮ ಮನ್ ಕೀ ಬಾತ್ ನಲ್ಲಿ ಪ್ರಮುಖವಾದ ಮೂರು ವಿಷಯಗಳ ಬಗ್ಗೆ ಹಂಚಿಕೊಳ್ಳುವಂತೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಟಾಂಗ್ ನೀಡಿದ್ದಾರೆ.
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸಾಂದರ್ಭಿಕ ಚಿತ್ರ
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸಾಂದರ್ಭಿಕ ಚಿತ್ರ

ದೆಹಲಿ: ಪ್ರಧಾನಮಂತ್ರಿ ನರೇಂದ್ರಮೋದಿ ಅವರ ಆಕಾಶವಾಣಿ ಕಾರ್ಯಕ್ರಮ ಮನ್ ಕೀ ಬಾತ್ ನಲ್ಲಿ ಪ್ರಮುಖವಾದ ಮೂರು ವಿಷಯಗಳ ಬಗ್ಗೆ ಹಂಚಿಕೊಳ್ಳುವಂತೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಟಾಂಗ್ ನೀಡಿದ್ದಾರೆ.

ಉದ್ಯೋಗ ಸೃಷ್ಠಿ , ಡೋಕ್ಲಾಮದಿಂದ ಚೀನಾ ಓಡಿಸಲು ಕೈಗೊಂಡಿರುವ ಕ್ರಮಗಳು ಹಾಗೂ ಹರಿಯಾಣದಲ್ಲಿನ ಅತ್ಯಾಚಾರದ ಬಗ್ಗೆ ತಮ್ಮ ಅಭಿಪ್ರಾಯ ಹಂಚಿಕೊಳ್ಳುವಂತೆ ರಾಹುಲ್ ಗಾಂಧಿ ಟ್ವಿಟ್ ಮಾಡಿದ್ದಾರೆ.

ಜನವರಿ 28 ರ ಮನ್ ಕೀ ಬಾತ್ ಆವೃತ್ತಿಯಲ್ಲಿ ಜನರು ತಮ್ಮ ಸಲಹೆ, ಅಭಿಪ್ರಾಯ ಹಂಚಿಕೊಳ್ಳುವಂತೆ ಪ್ರಧಾನಿ ಮೋದಿ ಟ್ವಿಟ್ ಮರುದಿನವೇ ರಾಹುಲ್ ಗಾಂಧಿ ಟ್ವಿಟ್ ಮಾಡಿದ್ದು, ಮೋದಿ ತಮ್ಮ ಜ್ಞಾನದಂತೆ ಮಾತನಾಡುತ್ತಿದ್ದಾರೆ ಆದರೆ, ಜನರಿಗೆ ಮಾತ್ರ ಕೇಳಿಸುತ್ತಿಲ್ಲ ಎಂದು  ಆಪಾದಿಸಿದ್ದಾರೆ.

ಡೋಕ್ಲಾಮದಿಂದ ಚೀನಾ ಓಡಿಸುವಂತೆ ರಾಹುಲ್ ಗಾಂಧಿ ಆಗ್ರಹಿಸಿದ್ದಾರೆ.ಡೋಕ್ಲಾಮದಲ್ಲಿ ಚೀನಾ ಕಟ್ಟಡ ಕಾಮಗಾರಿ ನಡೆಸುತ್ತಿದೆ ಎಂಬ ವರದಿ ಬೆನ್ನಲ್ಲೇ ರಾಹುಲ್ ಗಾಂಧಿ ಹೇಳಿಕೆ ಹೊರಬಿದ್ದಿದ್ದು, ಈ ವಿಚಾರದಲ್ಲಿ ಭಾರತ- ಚೀನಾ ಕಳೆದೊಂದು ವರ್ಷದಿಂದ ದೋಕಾ ರೀತಿಯಲ್ಲಿ ವರ್ತಿಸುತ್ತಿವೆ ಎಂದು ಅವರು ಟೀಕಿಸಿದ್ದಾರೆ.


ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com