ರಾಹುಲ್ ಗಾಂಧಿ ನಾಯಕತ್ವದಲ್ಲಿ ಸಾರ್ವತ್ರಿಕ ಚುನಾವಣೆ ಗೆದ್ದು ಅಧಿಕಾರಕ್ಕೆ ಬರುತ್ತೇವೆ:ಅಹ್ಮದ್ ಪಟೇಲ್
ನವದೆಹಲಿ: ಗುಜರಾತ್ ವಿಧಾನಸಭಾ ಚುನಾವಣಾ ಫಲಿತಾಂಶ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಆತ್ಮಸ್ಥೈರ್ಯ ತುಂಬಿದ್ದು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಎದುರಿಸಲಾಗುವುದು ಎಂದು ಸೋನಿಯಾಗಾಂಧಿ ರಾಜಕೀಯ ಕಾರ್ಯದರ್ಶಿ ಅಹ್ಮದ್ ಪಟೇಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಪ್ರಧಾನಮಂತ್ರಿ ನರೇಂದ್ರಮೋದಿ ಅವರ ತವರು ರಾಜ್ಯದಲ್ಲಿ ಬಿಜೆಪಿಗಿಂತ ಕಾಂಗ್ರೆಸ್ ನೈತಿಕವಾಗಿ ಗೆದ್ದಿದೆ. ಗುಜರಾತ್ ಚುನಾವಣಾ ಫಲಿತಾಂಶ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಹೊಸ ಹುಮ್ಮಸ್ಸು ಮೂಡಿಸಿದ್ದು, ಗುಜರಾತ್ ಮಾತ್ರವಲ್ಲ ಇಡೇ ದೇಶದಲ್ಲಿ ಗೆಲ್ಲುತ್ತೇವೆ , ಬಿಜೆಪಿಯನ್ನು ಸೋಲಿಸುತ್ತೇವೆ ಎಂಬ ನಂಬಿಕೆ ಇರುವುದಾಗಿ ಅಹ್ಮದ್ ಪಟೇಲ್ ಸುದ್ದಿಸಂಸ್ಥೆಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ.
ಮುಂಬರುವ ವಿವಿಧ ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲೂ ಯುವ ನಾಯಕ , ರಾಹುಲ್ ಗಾಂಧಿ ನಾಯಕತ್ವದಲ್ಲಿ ಚುನಾವಣೆ ಎದುರಿಸಿ ಅಧಿಕಾರದ ಚುಕ್ಕಾಣಿ ಹಿಡಿಯುವುದಾಗಿ ಹೇಳಿದ್ದಾರೆ.
ಲೋಕಸಭಾ ಚುನಾವಣೆಗಾಗಿ ಸಮಾನ ಮನಸ್ಕ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳಲಾಗುವುದು, ಈ ಬಗ್ಗೆ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಹಿರಿಯ ಮುಖಂಡರು ನಿರ್ಧಾರ ಕೈಗೊಳ್ಳುತ್ತಾರೆ ಎಂದು ಅಹ್ಮದ್ ಪಟೇಲ್ ತಿಳಿಸಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ