ಭವನಾ ಅಗ್ನಿ ದುರಂತ: ಮೃತರ ಕುಟುಂಬಕ್ಕೆ ರೂ.5 ಲಕ್ಷ ಪರಿಹಾರ ಘೋಷಿಸಿದ ಸಿಎಂ ಕೇಜ್ರಿವಾಲ್

ದೆಹಲಿಯ ಭವನಾ ಕೈಗಾರಿಕಾ ಕಾರ್ಖಾನೆಯಲ್ಲಿ ಸಂಭವಿಸಿದ ಅಗ್ನಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಮೃತರ ಕುಟುಂಬಕ್ಕೆ ರೂ.5 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ...
ಅಗ್ನಿ ದುರಂತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್
ಅಗ್ನಿ ದುರಂತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್
Updated on: 
ನವದೆಹಲಿ: ದೆಹಲಿಯ ಭವನಾ ಕೈಗಾರಿಕಾ ಕಾರ್ಖಾನೆಯಲ್ಲಿ ಸಂಭವಿಸಿದ ಅಗ್ನಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಮೃತರ ಕುಟುಂಬಕ್ಕೆ ರೂ.5 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ. 
ಅಗ್ನಿ ದುರಂತ ಸಂಭವಿಸಿರುವ ಸುದ್ದಿ ತಿಳಿಯುತ್ತಿದ್ದಂತೆಯೇ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಕೇಜ್ರಿವಾಲ್ ಅವರು, ಮೃತರ ಕುಟುಂಬಕ್ಕೆ ರೂ.5 ಲಕ್ಷ ಪರಿಹಾರ ನೀಡುವುದಾಗಿ ಘೋಷಣೆ ಮಾಡಿದರು. 
ಪ್ರಸ್ತುತ ಪ್ರಕರಣ ಸಂಬಂಧ ತನಿಖೆಗೆ ಆದೇಶಿಸಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ತನಿಖೆ ಪೂರ್ಣಗೊಂಡ ಬಳಿಕ ಸತ್ಯಾಂಶ ತಿಳಿದುಬರಲಿದೆ ಎಂದು ಹೇಳಿದ್ದಾರೆ. 
ದುರ್ಘಟನೆಯಲ್ಲಿ ಮೃತಪಟ್ಟವರಿಗೆ ಸರ್ಕಾರ ರೂ.5 ಲಕ್ಷ ಹಾಗೂ ಗಾಯಗೊಂಡಿರುವ ಇಬ್ಬರಿಗೆ ರೂ.1 ಲಕ್ಷ ಪರಿಹಾರ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ. 
ಬಳಿಕ ಮಾತನಾಡಿದ ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅವರು, ಕಟ್ಟಡದಲ್ಲಿ ಪಟಾಕಿಗಳ ಪ್ಯಾಕಿಂಗ್ ಮಾಡಲಾಗುತ್ತಿತ್ತು ಎಂದು ಪ್ರಾಥಮಿಕ ತನಿಖೆ ವೇಳೆ ತಿಳಿದುಬಂದಿದೆ. ಕಟ್ಟಡದಲ್ಲಿ ಯಾವುದೇ ರೀತಿಯ ಯಂತ್ರಗಳು ಕಂಡು ಬಂದಿಲ್ಲ ಎಂದಿದ್ದಾರೆ. 
ದುರ್ಘಟನೆಗೆ ಪ್ರಧಾನಿ ಮೋದಿ ಸಂತಾಪ
ಅಗ್ನಿ ಅವಘಡಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸಂತಾಪ ಸೂಚಿಸಿದ್ದಾರೆ. 
ಘಟನೆ ಕುರಿತಂತೆ ಸಾಮಾಜಿಕ ಜಾಲತಾಣ ಟ್ವಿಟರ್'ನಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಮೃತರ ಕುಟುಂಬಸ್ಥರ ಸಂತಾಪ ಸೂಚಿಸುತ್ತೇನೆ. ಗಾಯಾಳುಗಳು ಶೀಘ್ರಗತಿಯಲ್ಲಿ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆಂದು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com