
ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಸರ್ಕಾರದ 20 ಮಂದಿ ಶಾಸಕರನ್ನು ಅನರ್ಹಗೊಳಿಸುವಂತೆ ಚುನಾವಣಾ ಆಯೋಗ ಮಾಡಿದ್ದ ಶಿಫಾರಸ್ಸಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಇಂದು ಅಂಕಿತ ಹಾಕಿದ್ದಾರೆ.
ಲಾಭದಾಯಕ ಹುದ್ದೆಯನ್ನು ಹೊಂದಿದ್ದ ಆರೋಪದ ಹಿನ್ನೆಲೆಯಲ್ಲಿ ಈ ಶಾಸಕರನ್ನು ಅನರ್ಹಗೊಳಿಸುವಂತೆ ಚುನಾವಣಾ ಆಯೋಗ ಶುಕ್ರವಾರ ರಾಷ್ಟ್ರಪತಿಗೆ ಶಿಫಾರಸ್ಸು ಮಾಡಿತ್ತು.
2015 ಮಾರ್ಚ್ 13 ರಿಂದ ಸೆಪ್ಟೆಂಬರ್ 8 2016ರವರೆಗೆ ಈ ಶಾಸಕರು ಸಂಸದೀಯ ಕಾರ್ಯದರ್ಶಿ ಹುದ್ದೆಯನ್ನು ಲಾಭದಾಯಕವಾಗಿ ಹೊಂದಿದ್ದರು. ಇದರಿಂದಾಗಿ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸುವಂತೆ ಚುನಾವಣಾ ಆಯೋಗ ಶಿಫಾರಸ್ಸಿನಲ್ಲಿ ಹೇಳಿತ್ತು, ಆದರೆ, ಈ ಶಾಸಕರು ಯಾವುದೇ ಸಂಬಳ, ಸವಲತ್ತು ಪಡೆದಿಲ್ಲ ಎಂದು ಆಮ್ ಆದ್ಮಿ ಪಕ್ಷ ವಾದಿಸಿತ್ತು.
ರಾಷ್ಟ್ರಪತಿಗಳ ಅಂಕಿತದಿಂದಾಗಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಭಾರಿ ಮುಖಭಂಗವಾಗಿದ್ದು, ಶೀಘ್ರದಲ್ಲಿಯೇ ಉಪಚುನಾವಣೆ ಘೋಷಣೆಯಾಗುವ ಸಾಧ್ಯತೆ ಇದೆ.
Advertisement