ಸ್ಯಾನಿಟರಿ ನ್ಯಾಪ್ಕಿನ್ ಮೇಲೆ ಜಿಎಸ್ ಟಿ: ದೆಹಲಿ, ಬಾಂಬೆ ಹೈಕೋರ್ಟ್ ವಿಚಾರಣೆಗೆ ಸುಪ್ರೀಂ ತಡೆ

ದೆಹಲಿ ಮತ್ತು ಬಾಂಬೆ ಹೈಕೋರ್ಟ್ ನಲ್ಲಿ ನಡೆಯುತ್ತಿರುವ ಸ್ಯಾನಿಟರಿ ನ್ಯಾಪ್ಕಿನ್ ಗಳ ಮೇಲೆ ಶೇ.12 ರಷ್ಟು ಜಿಎಸ್ ಟಿಗೆ ಸಂಬಂಧಿಸಿದ....
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್
ನವದೆಹಲಿ: ದೆಹಲಿ ಮತ್ತು ಬಾಂಬೆ ಹೈಕೋರ್ಟ್ ನಲ್ಲಿ ನಡೆಯುತ್ತಿರುವ ಸ್ಯಾನಿಟರಿ ನ್ಯಾಪ್ಕಿನ್ ಗಳ ಮೇಲೆ ಶೇ.12 ರಷ್ಟು ಜಿಎಸ್ ಟಿಗೆ ಸಂಬಂಧಿಸಿದ ಪ್ರಕರಣಗಳ ವಿಚಾರಣೆಗೆ ಸೋಮವಾರ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ. 
ಸ್ಯಾನಿಟರಿ ನ್ಯಾಪ್ ಕಿನ್ ಗೆ ಸಂಬಂಧಿಸಿದಂತೆ ಎಲ್ಲಾ ಪ್ರಕರಣಗಳ ವಿಚಾರಣೆ ತಾನು ನಡೆಸುವುದಾಗಿ ಸುಪ್ರೀಂ ಕೋರ್ಟ್ ಇಂದು ಸ್ಪಷ್ಟಪಡಿಸಿದೆ. ಅಲ್ಲದೆ ಈ ಸಂಬಂಧ ಅರ್ಜಿದಾರರಿಗೂ ಕೋರ್ಟ್ ನೋಟಿಸ್ ನೀಡಿದೆ.
ಜಿಎಸ್ ಟಿ ಅಡಿಯಲ್ಲಿ ಬಿಂದಿ, ಸಿಂಧೂರ ಇತರೆ ವಸ್ತುಗಳ ತೆರಿಗೆ ದರವನ್ನು ಇಳಿಕೆ ಮಾಡಲಾಗಿದ್ದು, ಸ್ಯಾನಿಟರಿ ನ್ಯಾಪ್ಕಿನ್ ಬೆಲೆಯನ್ನು ಇಳಿಕೆ ಮಾಡುವುದರ ಬಗ್ಗೆಯೂ ಸರ್ಕಾರ ಗಮನ ಹರಿಸಬೇಕೆಂದು ದೆಹಲಿ ಹೈ ಕೋರ್ಟ್ ಸಲಹೆ ನೀಡಿತ್ತು. ಅಷ್ಟೇ ಅಲ್ಲದೇ ಶೇ.12 ರಷ್ಟು ತೆರಿಗೆ ವಿಧಿಸುವುದಕ್ಕೂ ಮುನ್ನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯೊಂದಿಗೆ ಚರ್ಚಿಸಲಾಗಿದೆಯೇ ಎಂದು ಹೈಕೋರ್ಟ್ ಪ್ರಶ್ನಿಸಿತ್ತು.
ಈ ಕುರಿತು ಹೈಕೋರ್ಟ್ ಅಫಿಡವಿಟ್ ಸಲ್ಲಿಕೆ ಮಾಡಿರುವ ಜಿಎಸ್ ಟಿ ಕೌನ್ಸಿಲ್, ಜಿಎಸ್ ಟಿ ಜಾರಿಗೆ ಬರುವುದಕ್ಕೂ ಮುನ್ನ ಸ್ಯಾನಿಟರಿ ನ್ಯಾಪ್ಕಿನ್ ಗಳ ಮೇಲಿನ ತೆರಿಗೆ ಶೇ.13 ರಷ್ಟಿತ್ತು. ಇದನ್ನು ಗಮನದಲ್ಲಿಟ್ಟುಕೊಂಡು ಶೇ.12 ರಷ್ಟು ತೆರಿಗೆಯನ್ನು ವಿಧಿಸಲಾಗಿದೆ ಎಂದು ತಿಳಿಸಿದೆ.
ಸ್ಯಾನಿಟರಿ ನ್ಯಾಪ್ ಕಿನ್ ಅನ್ನು ತೆರಿಗೆ ಮುಕ್ತಗೊಳಿಸಬೇಕು ಎಂದು ದೇಶಾದ್ಯಂತೆ ಪ್ರತಿಭಟನೆಗಳು ನಡೆಯುತ್ತಿದ್ದು, ಇತ್ತೀಚಿಗಷ್ಟೇ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನ್ಯಾಪ್ ಕಿನ್ ಮೇಲೆ ಸಂದೇಶ ಬರೆದು 1 ಸಾವಿರ ನ್ಯಾಪ್ ಕಿನ್ ಗಳನ್ನು ವಿದ್ಯಾರ್ಥಿ ಸಂಘಟನೆಯೊಂದು ಕಳುಹಿಸಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com